ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು.
‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.
Glad to inform that, as we brought it to his attention, our Union MoS Shri @VSOMANNA_BJP has intervened and instructed authorities not to indulge In any such practices that require those appearing for the examination for the post of Nursing Superintendent of Indian Railways to… pic.twitter.com/Ii3TXM01jf
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) April 28, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.