ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ಗೌರವ್ ಭಾಟಿಯಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಈ ನಿರ್ಣಾಯಕ ಸಮಯದಲ್ಲಿ ಕಾಂಗ್ರೆಸ್ ಇಂತಹ ಪೋಸ್ಟ್ ಮೂಲಕ ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪಾಕಿಸ್ತಾನಕ್ಕೆ ತಾನು ಇಸ್ಲಾಮಾಬಾದ್ ಜೊತೆಗಿದ್ದೇನೆ ಎಂಬ ಸಂದೇಶವನ್ನು ಕಾಂಗ್ರೆಸ್ ನೀಡುತ್ತಿದೆ ಎಂದು ಭಾಟಿಯಾ ಆರೋಪಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕೆಲವು ಕಾಂಗ್ರೆಸ್ ನಾಯಕರ ಕಾಮೆಂಟ್ಗಳನ್ನು ಸಹ ಅವರು ಉಲ್ಲೇಖಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಭಯೋತ್ಪಾದಕರಿಗೆ ಸೂಕತ ಉತ್ತರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬಿಜೆಪಿ ವಕ್ತಾರರು ಪ್ರತಿಪಾದಿಸಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಧಾನಿಯ ತಲೆ ಇಲ್ಲದ ಚಿತ್ರವನ್ನು ಹಂಚಿಕೊಂಡಿತ್ತು.
The Congress leaves little doubt with its use of “Sar Tan Se Juda” imagery. This is not merely a political statement; it is a dog whistle aimed at its Muslim vote bank and a veiled incitement against the Prime Minister. It is not the first time the Congress has resorted to such… https://t.co/WEgblPq2FX
— Amit Malviya (@amitmalviya) April 29, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.