ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ)ಯು ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿದೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ವಿವಾದಿತ ಹೇಳಿಕೆಯನ್ನು ಕಮಲ್ ಹಾಸನ್ ನೀಡಿದ್ದರು.
ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಮಾತನಾಡಿದ ಕೆಎಫ್ಸಿಸಿ ಪ್ರತಿನಿಧಿ ಸಾ ರಾ ಗೋವಿಂದು, ಕಮಲ್ ಹಾಸನ್ ಅವರ ಥಗ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯನ್ನು ನಿಷೇಧಿಸಲು ನಿರ್ಧರಿಸಿದ್ದೇವೆ. ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೆ ಚಿತ್ರ ಬಿಡುಗಡೆಯನ್ನು ಸ್ಥಗಿತಗೊಳಿಸಬೇಕೆಂಬ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರ ಕನ್ನಡ ಸಂಘಟನೆಗಳ ಬೇಡಿಕೆಗಳ ಜೊತೆ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಅವರು ಪುನರುಚ್ಚರಿಸಿದರು.
ಕನ್ನಡ ಜನರ ಭಾವನೆಗಳಿಗೆ ನೋವುಂಟು ಮಾಡಿರುವ ಕಮಲ್ ಹಾಸನ್ ಇನ್ನೂ ಕನನಡಿಗರ ಕ್ಷಮೆಯಾಚಿಸಿಲ್ಲ.
ಥಗ್ ಲೈಫ್ ಚಿತ್ರವನ್ನು ಮಣಿರತ್ನಂ ನಿರ್ದೇಶಿಸಿದ್ದು, ಕಮಲ್ ಹಾಸನ್, ತ್ರಿಶಾ ಕೃಷ್ಣನ್ ಮತ್ತು ಸಿಲಂಬರಸನ್ ಟಿಆರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.