ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡಲಾಗಿದೆ. 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಇದರಡಿ ಬೈಂದೂರಿನ 3 ಕಡೆಗಳಲ್ಲಿ ಆರೋಗ್ಯ ಕೇಂಗ್ರ ಸ್ಥಾಪನೆಯಾಗಲಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
ಹೊಸಂಗಡಿ, ನಾಡ ಹಾಗೂ ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು, ಶೀಘ್ರದಲ್ಲೇ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದ್ದಾರೆ.
ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಸರ್ವೇ ನಂಬ್ರ 49/1 ರಲ್ಲಿ 0.29 ಎಕ್ರೆ ವಿಸ್ತೀರ್ಣ, ಬೈಂದೂರು ತಾಲೂಕು ನಾಡ ಗ್ರಾಮದ ಸರ್ವೇ ನಂಬ್ರ 185 ರಲ್ಲಿ 0.05 ಎಕ್ರೆ ಹಾಗೂ ಹೇರೂರು ಗ್ರಾಮದ ಸರ್ವೇ ನಂಬ್ರ 83 ರಲ್ಲಿ 0.10 ಎಕ್ರೆ ಜಾಗವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಉದ್ದೇಶಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಸರಿಗೆ ಮಂಜೂರುಗೊಂಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.