ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದ ಬಳಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದೆ ಎಂದು ಸ್ಥಳೀಯರು ವರದಿ ಮಾಡಿರುವ ಹಿನ್ನೆಲೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಾನಗರದ ಸಲಾಧಿ ಪ್ರದೇಶದಲ್ಲಿ ನಾಗರಿಕರೊಬ್ಬರು ಮೂವರು ಶಂಕಿತ ವ್ಯಕ್ತಿಗಳನ್ನು ಕಂಡ ಬಗ್ಗೆ ಮಾಹಿತಿ ನೀಡಿದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಜಂಟಿ ಕಾರ್ಯಾಚರಣೆ ತಂಡವು ಶೋಧ ಕಾರ್ಯದಲ್ಲಿ ತೊಡಗಿದ್ದು, ಆ ಪ್ರದೇಶದಲ್ಲಿ ಮತ್ತು ಹೆದ್ದಾರಿಯಲ್ಲಿ ಕಣ್ಗಾವಲು ತೀವ್ರಗೊಳಿಸಲಾಗಿದೆ.
ಶಂಕಿತ ಭಯೋತ್ಪಾದಕರ ಚಲನವಲನಗಳ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಕಥುವಾ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕಳೆದ ಮಂಗಳವಾರ ಕೂಡ ಇದೇ ರೀತಿಯ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿಯ ಬಳಿಕ ಜಮ್ಮು-ಕಾಶ್ಮೀರ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಅಮರನಾಥ ಯಾತ್ರೆ ಆರಂಭವಾದ ಹಿನ್ನೆಯಲ್ಲಿ ಯೋಧರು ಬಿಗಿ ಬಂದೋಬಸ್ತ್ಗಳನ್ನು ನಡೆಸುತ್ತಿದ್ದಾರೆ. ಉಗ್ರ ವಿರೋಧಿ ಕಾರ್ಯಾಚರಣೆಗಳು ಕೂಡ ತೀವ್ರಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.