ನವದೆಹಲಿ: ಜನಸಂಖ್ಯಾ ಗಣತಿ-2027 ಅನ್ನು ಜಾತಿಗಳ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ಬುಧವಾರ ಘೋಷಿಸಿದೆ.
ದೇಶದ ಬಹುತೇಕ ಭಾಗಗಳಲ್ಲಿ ಮಾರ್ಚ್, 2027 ರ ಮೊದಲ ದಿನದಿಂದಲೇ ಗಣತಿ ಆರಂಭವಾಗುವ ನಿರೀಕ್ಷೆ ಇದೆ.
ಆದರೆ, ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಹಿಮಪಾತ ಪ್ರದೇಶಗಳಲ್ಲಿ ಅಕ್ಟೋಬರ್, 2026 ರ ಮೊದಲ ದಿನದ ಗಣತಿ ಆರಂಭವಾಗುವ ನಿರೀಕ್ಷೆ ಇದೆ.
“ಈ ದಿನಾಂಕಗಳೊಂದಿಗೆ ಜನಸಂಖ್ಯಾ ಗಣತಿ ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಯ ಪ್ರಕಾರ 16.06.2025 ರಂದು ತಾತ್ಕಾಲಿಕವಾಗಿ ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸಲಾಗುವುದು” ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2021 ರ ಜನಗಣತಿಯನ್ನು ಸ್ಥಗಿತಗೊಳಿಸಿರುವುದು ಸೇರಿದಂತೆ ಹಲವಾರು ವಿಳಂಬಗಳ ನಂತರ ಸರ್ಕಾರ ಈ ಮಹತ್ವಪೂರ್ಣ ನಿರ್ಧಾರವನ್ನು ತೆಗೆದುಕೊಂಡಿದೆ.
“ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ನಿಬಂಧನೆಗಳ ಅಡಿಯಲ್ಲಿ ನಡೆಸಲಾಗುತ್ತದೆ. ಭಾರತದ ಕೊನೆಯ ಜನಗಣತಿಯನ್ನು 2011 ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿದೆ” ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.