ಲಕ್ನೋ: ಮೂರು ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಶುಕ್ರವಾರ ಉತ್ತರ ಪ್ರದೇಶ ಪೊಲೀಸರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಜೂನ್ 5 ರ ಬೆಳಿಗ್ಗೆ ಚಂದಾನಗರ ಮೆಟ್ರೋ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದ ಮಗು ನಂತರ ಅಲಂಬಾಗ್ನ ಮೆಟ್ರೋ ಸೇತುವೆಯ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ಪೋಷಕರು ಆಕೆಯನ್ನು ಲೋಕ್ ಬಂಧು ಆಸ್ಪತ್ರೆಗೆ ಕರೆದೊಯ್ದು ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಗುವಿನೊಂದಿಗೆ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಪೊಲೀಸರು ಆರೋಪಿಯನ್ನು ದೀಪಕ್ ವರ್ಮಾ ಎಂದು ಗುರುತಿಸಿ ಆತನ ಬೆನ್ನು ಬಿದ್ದಿದ್ದಾರೆ. ಪೊಲೀಸರ ಪ್ರಕಾರ, ವರ್ಮಾ ಹಲವು ಪ್ರಕರಣದ ಅಪರಾಧಿಯಾಗಿದ್ದು, ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಘಟನೆ ವರದಿಯಾದ ನಂತರ ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಯಿತು. ಅವನ ವಾಹನ ನೋಂದಣಿಯನ್ನು ಪತ್ತೆಹಚ್ಚಲಾಯಿತು ಮತ್ತು ಅವನ ಬಗ್ಗೆ ಮಾಹಿತಿ ನೀಡುವವರಿಗೆ ರೂ. 1 ಲಕ್ಷ ಬಹುಮಾನವನ್ನು ಘೋಷಿಸಲಾಯಿತು. ನಂತರ ಶುಕ್ರವಾರ ಮುಂಜಾನೆ ಕಂಟೋನ್ಮೆಂಟ್ ಪ್ರದೇಶದ ದೇವಿ ಖೇಡಾ ಬಳಿ ವರ್ಮಾನನ್ನು ತಡೆಹಿಡಿಯಲಾಯಿತು.
ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ ಅವರ ಪ್ರಕಾರ, ವರ್ಮಾ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಎಗರಿದಾಗ ಆತನ ಮೇಲೆ ಗುಂಡು ಹಾರಿಸಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಸಾವನ್ನಪ್ಪಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.