ನವದೆಹಲಿ: ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ.
ಆಪರೇಷನ್ ಸಿಂಧೂರ್ ನಂತರ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರ ನೀಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ನಂತರ ಈ ಕ್ರಮ ಬಂದಿದೆ.
ಪೂರ್ಣ ಹಾನಿಗೊಳಗಾದ ಪ್ರತಿ ಮನೆಗೆ 2 ಲಕ್ಷ ರೂಪಾಯಿ ಮತ್ತು ಭಾಗಶಃ ಹಾನಿಗೊಳಗಾದ ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ನಿರ್ಧಾರವನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದನ್ನು ಸಚಿವಾಲಯ ಖಚಿತಪಡಿಸಿದೆ.
ಪಂಜಾಬ್ನ ಗಡಿ ಪ್ರದೇಶಗಳಲ್ಲಿಯೂ ಇದೇ ರೀತಿಯ ಪರಿಹಾರವನ್ನು ನೀಡಲು ಕೇಂದ್ರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.