ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಎರಡು ಸಾವಿರ ಚಾಲನಾ ತರಬೇತಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೇಶದ ಹಿಂದುಳಿದ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಈ ತರಬೇತಿ ಶಾಲೆಗಳನ್ನು ತೆರೆಯಲಾಗುವುದು, ಇದು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.
ದೇಶದಲ್ಲಿ ಸುಮಾರು 22 ಲಕ್ಷ ಚಾಲಕರ ಕೊರತೆಯಿದೆ ಮತ್ತು ಈ ತರಬೇತಿ ಶಾಲೆಗಳು ಕೌಶಲ್ಯಪೂರ್ಣ ಚಾಲಕರ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ತಮ್ಮ ಸಚಿವಾಲಯ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದೆ ಎಂದು ಗಡ್ಕರಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.