ಬೆಂಗಳೂರು: ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಇಂದು ಬಂಧಿಸಿದರು.
ಆರ್.ಸಿ.ಬಿ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಶಾಸಕ ಎಲ್. ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಎಸ್. ಮುನಿರಾಜು, ಎಂ. ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ಶ್ರೀಮತಿ ಭಾರತಿ ಶೆಟ್ಟಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಪದಾಧಿಕಾರಿಗಳು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.