ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ‘ಭಾರತ ಈಗ ಭಯೋತ್ಪಾದನೆಯನ್ನು ಪ್ರಾಕ್ಸಿ ಯುದ್ಧವೆಂದು ಪರಿಗಣಿಸುವುದಿಲ್ಲ, ನಿಜವಾದ ಯುದ್ಧವೆಂದು ಪರಿಗಣಿಸುತ್ತದೆ’ ಎಂದು ಅಮೆರಿಕ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜೀವಗಳನ್ನು ಬಲಿ ಪಡೆದ ಬಗ್ಗೆ ಟ್ರಂಪ್ ಪ್ರಧಾನಿ ಮೋದಿ ಅವರಿಗೆ ಸಂತಾಪ ಸೂಚಿಸಿದ್ದಾರೆ.
ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದೊಂದಿಗಿನ ಕದನ ವಿರಾಮ ಒಪ್ಪಂದವನ್ನು ಇಸ್ಲಾಮಾಬಾದ್ ಕೋರಿಕೆಯ ಮೇರೆಗೆ ಒಪ್ಪಿಕೊಳ್ಳಲಾಯಿತು ಎಂದು ಪ್ರಧಾನಿ ಮೋದಿ ಟ್ರಂಪ್ಗೆ ತಿಳಿಸಿದ್ದಾರೆ. ಈ ಮೂಲಕ ಅಮೆರಿಕಾದ ಮಧ್ಯಸ್ಥಿಕೆಯನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ.
“ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಭೇಟಿಯಾಗಬೇಕಿತ್ತು. ಆದರೆ ಅಧ್ಯಕ್ಷ ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಹಿಂತಿರುಗಬೇಕಾಯಿತು, ಇದರಿಂದಾಗಿಈ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಇದರ ನಂತರ, ಅಧ್ಯಕ್ಷ ಟ್ರಂಪ್ ಅವರ ಕೋರಿಕೆಯ ಮೇರೆಗೆ, ಇಂದು ಇಬ್ಬರೂ ನಾಯಕರು ದೂರವಾಣಿಯಲ್ಲಿ ಮಾತನಾಡಿದರು. ಸುಮಾರು 35 ನಿಮಿಷಗಳ ಕಾಲ ಮಾತನಾಡಿದರು. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಂತಾಪ ಸೂಚಿಸಿದ್ದರು ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಅದರ ನಂತರ ಅವರು ಮಾತನಾಡುತ್ತಿರುವುದು ಇದೇ ಮೊದಲು. ಹೀಗಾಗಿ, ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್ ಬಗ್ಗೆ ಅಧ್ಯಕ್ಷ ಟ್ರಂಪ್ ಅವರೊಂದಿಗೆ ವಿವರವಾಗಿ ಮಾತನಾಡಿದರು” ಎಂದು ಮಿಶ್ರಿ ಹೇಳಿದ್ದಾರೆ.
Foreign Secretary Vikram Misri announced that Prime Minister @narendramodi had a telephonic conversation with US President #DonaldTrump, which lasted approximately 35 minutes. During the discussion, PM Modi briefed President Trump about Operation Sindoor. PM Modi clarified that… pic.twitter.com/1RuPVc778V
— DD News (@DDNewslive) June 18, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.