ನವದೆಹಲಿ: ಲಂಡನ್ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್ನ ಬ್ಲಿಟ್ಜ್ ಸೆಮಿಫೈನಲ್ನ 2 ನೇ ಲೆಗ್ನಲ್ಲಿ ವಿಶ್ವದ ನಂ. 1 ಆಟಗಾರ್ತಿ ಹೌ ಯಿಫಾನ್ ಅವರನ್ನು ಸೋಲಿಸಿದ ಭಾರತದ ಅಗ್ರ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ದಿವ್ಯಾ ಅವರ ಯಶಸ್ಸು ಅವರ ಧೈರ್ಯ ಮತ್ತು ದೃಢನಿಶ್ಚಯವನ್ನು ಎತ್ತಿ ತೋರಿಸುತ್ತದೆ ಮತ್ತು ಇದು ಅನೇಕ ಮುಂಬರುವ ಚೆಸ್ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ದಿವ್ಯಾ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು. ಪ್ರಧಾನಮಂತ್ರಿಯವರ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ದಿವ್ಯಾ, “ಪ್ರಧಾನಮಂತ್ರಿ ಅವರಿಂದ ಗುರುತಿಸಲ್ಪಟ್ಟಿರುವುದು ನನಗೆ ದೊಡ್ಡ ಗೌರವ ಮತ್ತು ಪ್ರೋತ್ಸಾಹ” ಎಂದು ಹೇಳಿದ್ದಾರೆ.
Congratulations to Divya Deshmukh on defeating the World No. 1, Hou Yifan in the 2nd leg of Blitz semifinal at the World Team Blitz Championships, London. Her success highlights her grit and determination. It also inspires many upcoming chess players. Best wishes for her future… pic.twitter.com/mjdWO0llFT
— Narendra Modi (@narendramodi) June 19, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.