ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರು ಸ್ಥಳೀಯ ತಾಲೂಕು ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳನ್ನು ಉದ್ದೇಶಪೂರ್ವಕವಾಗಿ ಕಾರ್ಯಕ್ರಮಗಳಲ್ಲಿ ಅಲಕ್ಷಿಸುತ್ತಿರುವ ಬಗ್ಗೆ ಬೆಳ್ತಂಗಡಿ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ .
ಧರ್ಮಸ್ಥಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಳ್ಳಿಕಾರು ರಸ್ತೆ ಕಾಂಕ್ರಿಟೀಕರಣ, ಪುದುವೆಟ್ಟು ರಸ್ತೆ ಕಾಂಕ್ರೀಟ್ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅಧಿಕಾರಿಗಳ ಮೂಲಕ ಸ್ಥಳೀಯರು ಜನಪ್ರತಿನಿದಿಗಳು ನಿಗದಿತ ಅವಧಿಗೆ ಹಾಜರಾಗಲು ತಿಳಿಸಿ ನಿಗದಿತ ಸಮಯಕ್ಕೆ ಸ್ಥಳದಲ್ಲಿ ಉಪಸ್ಥಿತರಿದ್ದಾಗ್ಯೂ ಶಾಸಕರು ರಾಜಕೀಯ ಪಕ್ಷಪಾತದಿಂದ ಉದ್ದೇಶಪೂರ್ವಕವಾಗಿ ನಿಗದಿತ ಸಮಯಕ್ಕಿಂತ ಮೊದಲೇ ೨ ಕಡೆ ಶಿಲಾನ್ಯಾಸ ಮಾಡಿ ವಾಪಾಸಾಗಿದ್ದರು.
ಇದು ಸ್ಥಳೀಯ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೇ ಶಾಸನಬದ್ಧವಾಗಿ ರಚಿತವಾದ ವಿಕೆಂದ್ರೀಕರಣ ವ್ಯವಸ್ಥೆಗೆ ಮಾಡಿದ ಅಪಚಾರವಾಗಿದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದ್ದು ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲೂ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲಿ ಬಿಜೆಪಿ ತೀವ್ರವಾದ ಹೋರಾಟ ನಡೆಸಲಿಯೆಂದು ಬಿಜೆಪಿ ಮಂಡಲಾಧ್ಯಕ್ಷರಾದ ಬಾಲಕೃಷ್ಣ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ. ಎಸ್., ಜಯಂತ್ ಕೋಟ್ಯಾನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.