ಬ್ಯೂನಸ್ ಐರಿಸ್: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಅರ್ಜೇಂಟೀನಾಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅವರು ದೇಶದ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಿ, ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಲಿದ್ದಾರೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅರ್ಜೆಂಟೀನಾ ಪಾಲುದಾರಿಕೆಯನ್ನು ಹೆಚ್ಚಿಸುವ ಮಾರ್ಗಗಳನ್ನು ಚರ್ಚಿಸಲಿದ್ದಾರೆ.
ಶುಕ್ರವಾರ ಸಂಜೆ ತಲುಪಿದ ಮೋದಿ ಅವರಿಗೆ ಎಜೀಜಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು.
“ಅರ್ಜೆಂಟೀನಾ ಜೊತೆಗಿನ ಸಂಬಂಧಗಳನ್ನು ವೃದ್ಧಿಸುವತ್ತ ಗಮನಹರಿಸುವ ದ್ವಿಪಕ್ಷೀಯ ಭೇಟಿಗಾಗಿ ಬ್ಯೂನಸ್ ಐರಿಸ್ಗೆ ಬಂದಿಳಿದಿದ್ದೇನೆ. ಅಧ್ಯಕ್ಷ ಜೇವಿಯರ್ ಮಿಲಿ ಅವರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ವಿವರವಾದ ಮಾತುಕತೆ ನಡೆಸಲು ನಾನು ಉತ್ಸುಕನಾಗಿದ್ದೇನೆ” ಎಂದು ಅವರು X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದು ಪ್ರಧಾನ ಮಂತ್ರಿಯವರ ಐದು ರಾಷ್ಟ್ರಗಳ ಭೇಟಿಯ ಮೂರನೇ ರಾಷ್ಟ್ರ ಇದಾಗಿದೆ.
“ನಮ್ಮ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅರ್ಜೆಂಟೀನಾದ ರೋಮಾಂಚಕ ನಗರವಾದ ಬ್ಯೂನಸ್ ಐರಿಸ್ಗೆ ಅಧಿಕೃತ ಭೇಟಿ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದ್ದು, ಇದು ಭಾರತ-ಅರ್ಜೆಂಟೀನಾ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಸೂಚಿಸುತ್ತದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ರಕ್ಷಣೆ, ಕೃಷಿ, ಗಣಿಗಾರಿಕೆ, ತೈಲ ಮತ್ತು ಅನಿಲ, ನವೀಕರಿಸಬಹುದಾದ ಇಂಧನ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅರ್ಜೆಂಟೀನಾ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಮೋದಿ ಅವರು ಅಧ್ಯಕ್ಷ ಮಿಲೀ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
#WATCH | Argentina: Prime Minister Narendra Modi welcomed with chants of "Bharat Mata ki Jai", "Jai Shree Ram" and "Modi-Modi" as he reaches the hotel in Buenos Aires. Members of the Indian diaspora have gathered here.
(Source: ANI/DD News) pic.twitter.com/3LT85QD4Jb
— ANI (@ANI) July 5, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.