ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೇಶದ ತಲೆ ತಗ್ಗಿಸುವ ಮತ್ತೊಂದು ಅಮಾನುಷ ಕೃತ್ಯ ನಡೆದಿದೆ. ಬೇರೆ ಬೇರೆ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.
ಮೊದಲ ಪ್ರಕರಣದಲ್ಲಿ, ಶುಕ್ರವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಶ್ಚಿಮ ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿರುವ ಎರಡೂವರೆ ವರ್ಷದ ಮಗುವನ್ನು ಅದರ ಮನೆಯ ಹೊರಭಾಗದಿಂದ ಕದ್ದೊಯ್ದಿದ್ದಾರೆ. ಬಳಿಕ ನೆರೆಯ ಮನೆಯವರು ಬಾಲಕಿ ಪಕ್ಕದ ಪಾರ್ಕ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ನೋಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆಕೆ ಬಳಲುತ್ತಿದ್ದಳು ಎನ್ನಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ಆನಂದ್ ವಿಹಾರ್ ಪ್ರದೇಶದಲ್ಲಿ 5 ವರ್ಷದ ಬಾಲಕಿಯ ಮೇಲೆ 3 ಮಂದಿ ಅತ್ಯಾಚಾರ ಎಸಗಿದ್ದಾರೆ. ಆಕೆ ಮನೆಯಲ್ಲಿ ಒಬ್ಬಳೇ ಇದ್ದಾಗ ಪಕ್ಕದ ಮನೆಯವ ಬಂದ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದಾನೆ. ಈ ವೇಳೆ ಆತ ಮತ್ತು ಇತರ ಮೂವರು ಸೇರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ರಕ್ತಸಿಕ್ತವಾದ ಬಟ್ಟೆಯೊಂದಿಗೆ ಅವರ ಮೆನಯಿಂದ ಅಳುತ್ತಾ ಹೊರ ಬಂದ ಬಾಲಕಿಯನ್ನು ಇತರರು ಗಮನಿಸಿ ಸಹಾಯಕ್ಕೆ ಧಾವಿಸಿದ್ದಾರೆ.
ಎರದೂ ಘಟನೆಯಲ್ಲೂ ಬಾಲಕಿಯರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮಹಿಳಾ ಆಯೋಗ ಇವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.