ನವದೆಹಲಿ: ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭೂಮಿಗೆ ಆಗಮಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ ಮತ್ತು ಇತರರನ್ನು ಹೊತ್ತ ಸ್ಪೇಸ್ಎಕ್ಸ್ ಸಿಬ್ಬಂದಿ ಕ್ಯಾಪ್ಸುಲ್ ಗ್ರೇಸ್, IST ಮಧ್ಯಾಹ್ನ 3 ಗಂಟೆಯ ನಂತರ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಜಲಸ್ಪರ್ಶ ಮಾಡಿದೆ.
ಭಾರತೀಯ ಕಾಲಮಾನ ಸೋಮವಾರ ಮಧ್ಯಾಹ್ನ 2.37ಕ್ಕೆ ಗಗನಯಾತ್ರಿಗಳು ನೌಕೆಯನ್ನು ಏರಿದ್ದು, ಅದು 4:45ಕ್ಕೆ ಅನ್ಡಾಕ್ (ಐಎಸ್ಎಸ್ನಿಂದ ಬೇರ್ಪಡುವಿಕೆ) ಆಗಿದೆ ಹಾಗೂ ಭೂಮಿಯತ್ತ ಪಯಣ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನೌಕೆ ಭೂಸ್ಪರ್ಶ ಮಾಡಿದೆ.
ಭಾರತೀಯ ವಾಯುಪಡೆಯ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, 1984 ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ಭೇಟಿ ನೀಡಿದ ಎರಡನೇ ಭಾರತೀಯ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಇವರು.
ವಾಪಸಾತಿಯ ಬಳಿಕ ಗಗನಯಾತ್ರಿಗಳ ದೇಹ ಭೂಮಿಯ ವಾತಾವರಣಕ್ಕೆ ಒಗ್ಗಿಕೊಳ್ಳುವಂತೆ ಮಾಡಲು ಅವರಿಗಾಗಿ 7 ದಿನ ಪುನಶ್ಚೇತನ ಕಾರ್ಯಕ್ರಮ ನಡೆಸಲಾಗುವುದು. ನಂತರ ಅವರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ.
After 18 days in space, Group Captain Shubhanshu Shukla has returned to Earth. Splashdown complete. Mission accomplished!
Welcome back Shux!
Pic courtesy: SpaceX#ShubhanshuShukla #shubhanshushuklareturn #AxiomMission4 pic.twitter.com/05Wihdao5d
— Amit Chaturvedi (@amittchaturvedi) July 15, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.