ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20 ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಂತಿನಲ್ಲಿ, ಒಂಬತ್ತು ಕೋಟಿ ಎಪ್ಪತ್ತು ಲಕ್ಷಕ್ಕೂ ಹೆಚ್ಚು ರೈತರಿಗೆ 20,500 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ. ಈ ಬಿಡುಗಡೆಯೊಂದಿಗೆ, ಯೋಜನೆಯ ಪ್ರಾರಂಭದಿಂದಲೂ ಒಟ್ಟು ವಿತರಣೆ 3.90 ಲಕ್ಷ ಕೋಟಿ ರೂಪಾಯಿಗಳನ್ನು ಮೀರಿದೆ.
ಈ ಯೋಜನೆಯಡಿಯಲ್ಲಿ, ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ರೈತರ ಆಧಾರ್-ಲಿಂಕ್ಡ್ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ.
ಪ್ರಧಾನ ಮಂತ್ರಿಗಳು ಸುಮಾರು 2,200 ಕೋಟಿ ರೂಪಾಯಿಗಳ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಈ ಯೋಜನೆಗಳು ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ ಸೇರಿದಂತೆ ಬಹು ವಲಯಗಳನ್ನು ಪೂರೈಸುತ್ತವೆ. ಮೋಹನ್ ಸರಾಯ್-ಅಡಲ್ಪುರ ರಸ್ತೆಯಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ವಾರಣಾಸಿ-ಭದೋಹಿ ರಸ್ತೆ ಮತ್ತು ಛಿತೌನಿ-ಶೂಲ್ ಟಂಕೇಶ್ವರ್ ರಸ್ತೆಯ ಅಗಲೀಕರಣ ಮತ್ತು ಬಲವರ್ಧನೆಯನ್ನು ಹಾಗೂ ಹರ್ದತ್ಪುರದಲ್ಲಿ ರೈಲ್ವೆ ಮೇಲ್ಸೇತುವೆಯನ್ನು ಮೋದಿ ಉದ್ಘಾಟಿಸಿದರು. ದಲ್ಮಂಡಿ, ಲಹರ್ತಾರಾ-ಕೋಟ್ವಾ, ಗಂಗಾಪುರ, ಬಬತ್ಪುರ, ಇತರವುಗಳು ಸೇರಿದಂತೆ ಅನೇಕ ಗ್ರಾಮೀಣ ಮತ್ತು ನಗರ ಕಾರಿಡಾರ್ಗಳಲ್ಲಿ ಸಮಗ್ರ ರಸ್ತೆ ಅಗಲೀಕರಣ ಮತ್ತು ಬಲವರ್ಧನೆಗೆ ಮತ್ತು ಲೆವೆಲ್ ಕ್ರಾಸಿಂಗ್ 22C ಮತ್ತು ಖಾಲಿಸ್ಪುರ್ ಯಾರ್ಡ್ನಲ್ಲಿ ರೈಲ್ವೆ ಮೇಲ್ಸೇತುವೆಗಳಿಗೆ ಅವರು ಅಡಿಪಾಯ ಹಾಕಿದರು.
ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಬಲಪಡಿಸುವ ಸಲುವಾಗಿ, ಸ್ಮಾರ್ಟ್ ವಿತರಣಾ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿಗಳು ಮತ್ತು 880 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ವಿದ್ಯುತ್ ಮೂಲಸೌಕರ್ಯಗಳ ಭೂಗತೀಕರಣಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.
ಪ್ರವಾಸೋದ್ಯಮಕ್ಕೆ ಪ್ರಮುಖ ಉತ್ತೇಜನವಾಗಿ, ಎಂಟು ನದಿಮುಖದ ಕುಚ್ಚಾ ಘಾಟ್ಗಳ ಪುನರಾಭಿವೃದ್ಧಿ, ಕಾಳಿಕಾ ಧಾಮದಲ್ಲಿ ಅಭಿವೃದ್ಧಿ ಕಾರ್ಯಗಳು, ಶಿವಪುರದ ರಂಗಿಲ್ದಾಸ್ ಕುಟಿಯಾದಲ್ಲಿ ಕೊಳ ಮತ್ತು ಘಾಟ್ನ ಸುಂದರೀಕರಣ ಮತ್ತು ದುರ್ಗಾಕುಂಡ್ನ ಪುನಃಸ್ಥಾಪನೆ ಮತ್ತು ಜಲಶುದ್ಧೀಕರಣವನ್ನು ಪ್ರಧಾನಿ ಉದ್ಘಾಟಿಸಿದರು. ಕರ್ದಮೇಶ್ವರ ಮಹಾದೇವ ದೇವಾಲಯದ ಜೀರ್ಣೋದ್ಧಾರ ಕಾರ್ಯ, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ಜನ್ಮಸ್ಥಳವಾದ ಕಾರ್ಖಿಯಾನ್ ಅಭಿವೃದ್ಧಿ, ಸಾರನಾಥ, ರಿಷಿ ಮಾಂಡ್ವಿ ಮತ್ತು ರಾಮನಗರ ವಲಯಗಳಲ್ಲಿನ ನಗರ ಸೌಲಭ್ಯ ಕೇಂದ್ರಗಳು, ಲಮಾಹಿಯಲ್ಲಿರುವ ಮುನ್ಷಿ ಪ್ರೇಮ್ಚಂದ್ ಅವರ ಪೂರ್ವಜರ ಮನೆಯ ಪುನರಾಭಿವೃದ್ಧಿ ಮತ್ತು ವಸ್ತುಸಂಗ್ರಹಾಲಯದ ಮೇಲ್ದರ್ಜೆೀಕರಣ ಸೇರಿದಂತೆ ಇತರ ಕಾರ್ಯಗಳಿಗೆ ಅವರು ಅಡಿಪಾಯ ಹಾಕಿದರು. ಕಾಂಚನಪುರದಲ್ಲಿ ಅರ್ಬನ್ ಮಿಯಾವಾಕಿ ಅರಣ್ಯ ಅಭಿವೃದ್ಧಿ ಮತ್ತು ಶಹೀದ್ ಉದ್ಯಾನ್ ಮತ್ತು ಇತರ 21 ಉದ್ಯಾನವನಗಳ ಪುನರಾಭಿವೃದ್ಧಿ ಮತ್ತು ಸುಂದರೀಕರಣಕ್ಕೂ ಅವರು ಅಡಿಪಾಯ ಹಾಕಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.