ನವದೆಹಲಿ: ಗೋಮಾಂಸ ವಿಷಯಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರವನ್ನು ಉಂಟು ಮಾಡುವ ನಾಯಕರುಗಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸಮನ್ಸ್ ನೀಡಿದ್ದಾರೆ.
ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಉನ್ನೋ ಎಂಪಿ ಸಾಕ್ಷಿ ಮಹಾರಾಜ್, ಶಾಸಕ ಸಂಗೀತ್ ಸೋಮ್ ಅವರುಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ದಾದ್ರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರುಗಳು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಭುಗಿಲೇಳುವಂತೆ ಮಾಡಿದ್ದವು.
ಬಿಹಾರ ಚುನಾವಣೆಯ ಸಂದರ್ಭ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಪಕ್ಷಕ್ಕೆ ಹಾನಿಯುಂಟು ಮಾಡುವ ಸಾಧ್ಯತೆಗಳು ಇವೆ. ಪ್ರಧಾನಿ ನರೇಂದ್ರ ಮೊದಿಯವರು ತಮ್ಮ ಪಕ್ಷದ ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.