ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗಾಗಿ ಚೀನಾದ ಟಿಯಾಂಜಿನ್ನಲ್ಲಿ 20 ಕ್ಕೂ ಹೆಚ್ಚು ವಿದೇಶಿ ನಾಯಕರು ಒಟ್ಟುಗೂಡಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ, ಚೀನಿ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ನಡೆದ ಆತ್ಮೀಯ ಕ್ಷಣಗಳು ಭಾರೀ ಸುದ್ದಿ ಮಾಡಿದೆ.
ಶೃಂಗಸಭೆಯ ನೇಪಥ್ಯದಲ್ಲಿ ಇಂದು ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ ಮತ್ತು ಪುಟಿನ್, ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ರಷ್ಯಾದ ತೈಲ ಆಮದು ಮಾಡುತ್ತಿರುವ ಭಾರತದ ಮೇಲೆ ಶೇಕಡಾ 50 ರಷ್ಟು ಸುಂಕವನ್ನು ಅಮೆರಿಕಾ ವಿಧಿಸಿದ ನಂತರ ಮೊದಲ ಬಾರಿಗೆ ಇವರ ಭೇಟಿಯಾಗುತ್ತಿದೆ.
X ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ರಷ್ಯಾದ ನಾಯಕನೊಂದಿಗಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷ ನೀಡುತ್ತದೆ” ಎಂದು ಹೇಳಿದ್ದಾರೆ.
SCO ಶೃಂಗಸಭೆಯ ಸ್ಥಳದ ಇತರ ವೀಡಿಯೊಗಳು ಮತ್ತು ಫೋಟೋಗಳಲ್ಲಿ ಪ್ರಧಾನಿ ಮೋದಿ, ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ನಗು ಮತ್ತು ಹಸ್ತಲಾಘವಗಳೊಂದಿಗೆ ಸಂತೋಷದ ಕ್ಷಣವನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಬಹುದು.
Always a delight to meet President Putin! pic.twitter.com/XtDSyWEmtw
— Narendra Modi (@narendramodi) September 1, 2025
#WATCH | Prime Minister Narendra Modi, Chinese President Xi Jinping, Russian President Vladimir Putin, and other Heads of States/Heads of Governments pose for a group photograph at the Shanghai Cooperation Council (SCO) Summit in Tianjin, China.
(Source: DD News) pic.twitter.com/UftzXy6g3K
— ANI (@ANI) September 1, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.