ನವದೆಹಲಿ: ಜಿಎಸ್ಟಿ ಸುಧಾರಣೆಗಳಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದು, ತೆರಿಗೆ ದರಗಳನ್ನು ಕಡಿತಗೊಳಿಸಿರುವುದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಜಿಎಸ್ಟಿ ಸುಧಾರಣೆಗಳು ಬಡವರು, ಮಧ್ಯಮ ವರ್ಗ, ರೈತರು, ಎಂಎಸ್ಎಂಇಗಳು, ಮಹಿಳೆಯರು ಮತ್ತು ಯುವಕರಿಗೆ “ದೊಡ್ಡ ಪರಿಹಾರ” ತರುತ್ತವೆ ಎಂದು ಶಾ ಹೇಳಿದರು.
ಎಕ್ಸ್ ಪೋಸ್ಟ್ ಮಾಡಿರುವ ಅಮಿತ್ ಶಾ, “ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಕಾರ್ಯಗಳಿಗೆ ಬೆಂಬಲ ನೀಡುತ್ತಾರೆ. ಜಿಎಸ್ಟಿ ದರ ಕಡಿತ ಮತ್ತು ಪ್ರಕ್ರಿಯೆ ಸುಧಾರಣೆಗಳ ಈ ಐತಿಹಾಸಿಕ ನಿರ್ಧಾರವು ಬಡವರು ಮತ್ತು ಮಧ್ಯಮ ವರ್ಗಕ್ಕೆ ಭಾರಿ ಪರಿಹಾರವನ್ನು ತರುತ್ತದೆ, ಜೊತೆಗೆ ರೈತರು, ಎಂಎಸ್ಎಂಇಗಳು, ಮಹಿಳೆಯರು ಮತ್ತು ಯುವಕರನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.
ಸರಳೀಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನೋಂದಣಿ ಯೋಜನೆಯನ್ನು ಪರಿಚಯಿಸುವ ಜಿಎಸ್ಟಿ ಕೌನ್ಸಿಲ್ ನಿರ್ಧಾರವನ್ನು ಸಚಿವರು ಶ್ಲಾಘಿಸಿದರು.
“ವ್ಯವಸ್ಥೆಯನ್ನು ಸರಳೀಕರಿಸುವ ಮೂಲಕ ಮತ್ತು ಸಾಮಾನ್ಯ ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಮೂಲಕ, ಈ ಸುಧಾರಣೆಗಳು ಜೀವನ ಸುಲಭತೆಯನ್ನು ಖಚಿತಪಡಿಸುವುದಲ್ಲದೆ, ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ವ್ಯಾಪಾರ ಮಾಡುವ ಸುಲಭತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತವೆ. ಭಾರತಕ್ಕೆ ನಿಜವಾಗಿಯೂ ಪರಿವರ್ತನಾಶೀಲ ನಿರ್ಧಾರ” ಎಂದಿದ್ದಾರೆ.
ಜಿಎಸ್ಟಿ ಸುಧಾರಣೆಗಳ ಕುರಿತ ದಿಟ್ಟ ನಿರ್ಧಾರಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ಎಲ್ಲಾ ವಲಯಗಳಿಗೆ ಪರಿಹಾರವನ್ನು ತರಲು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ಘೋಷಿಸಿದೆ. ಹಲವು ಪ್ರಮುಖ ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡುವುದರೊಂದಿಗೆ, ಈ ಸುಧಾರಣೆಯು ಜೀವನ ಸುಲಭತೆಯನ್ನು ತರುತ್ತದೆ, ವ್ಯಾಪಾರ ಮಾಡುವ ಸುಲಭತೆಯನ್ನು ಮತ್ತಷ್ಟು ಬಲಪಡಿಸುತ್ತದೆ, ಸಣ್ಣ ವ್ಯವಹಾರಗಳನ್ನು ಸಬಲೀಕರಣಗೊಳಿಸುತ್ತದೆ ಮತ್ತು ಆತ್ಮನಿರ್ಭರ ಭಾರತ್ ಅಡಿಯಲ್ಲಿ ಭಾರತದ ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ. ಈ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ರಾಜನಾಥ್ ಸಿಂಗ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.
PM Shri @narendramodi Ji stands for what he commits.
This historic decision of GST rate cuts and process reforms will bring huge relief to the poor and middle class, while also supporting farmers, MSMEs, women and youth.
By simplifying the system and reducing the burden on… pic.twitter.com/yYVUCOtCvG
— Amit Shah (@AmitShah) September 3, 2025
The Government of India under the leadership of PM Shri @narendramodi has announced the Next-Gen GST reforms to bring relief across sectors. With tax rates reduced on many important items, this reform will bring ease of living, further strengthen ease of doing business, empower…
— Rajnath Singh (@rajnathsingh) September 3, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.