ಬಂಟ್ವಾಳ: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ನವೆಂಬರ್ ೧೯ ಮತ್ತು ೨೦ ರಂದು ಬೃಹತ್ ಮಂಗಳೂರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಅ.೨೬ ರಂದು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಸಂಚಯಗಿರಿಯಲ್ಲಿ ಮಾತನಾಡಿದ ಅವರು, ಸುಮಾರು ಮೂರು ಸಾವಿರ ಮಂದಿಗೆ ಉದ್ಯೋಗ ನೀಡುವ ಸಂಕಲ್ಪ ಇರಿಸಿಕೊಂಡು ಈ ಮೇಳವನ್ನು ಆಯೋಜಿಸಲಾಗುತ್ತಿದ್ದು, ಪ್ರತಿಷ್ಠಿತ ಕಂಪೆನಿಗಳಿಗೆ ಆಹ್ವಾನ ನೀಡಲಾಗಿದೆ. ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ಹಾಗೂ ಮಾನವಸಂಪನ್ಮೂಲದ ಸಮರ್ಪಕ ಬಳಕೆ ದೇಶದ ಅಭಿವೃದ್ದಿಯಲ್ಲಿ ಪ್ರಮುಖಪಾತ್ರ ವಹಿಸಲಿದ್ದು, ಔದ್ಯಮಿಕ ಕ್ಷೇತ್ರದಲ್ಲಿ ಈ ಮೇಳ ಹೊಸಕ್ರಾಂತಿ ನಡೆಸಲಿದೆ ಎಂದರು. ಉದ್ಯೋಗಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಮೇಳವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.