ಮಂಗಳೂರು: ‘2030ಕ್ಕೆ ಐದು ವರ್ಷಗಳು – ಸುಸ್ಥಿರ ಅಭಿವೃದ್ಧಿಗಾಗಿ ಬಹುಪಕ್ಷೀಯ ಪರಿಹಾರಗಳು..’ ಎಂಬ ವಿಷಯದ ಮೇಲೆ ವಿಶ್ವಸಂಸ್ಥೆಯ ಪ್ರಕಾರಗಳ ಎರಡನೇ ಸಮಿತಿಯ ಸಾಮಾನ್ಯ ಚರ್ಚೆಯಲ್ಲಿ ಭಾರತದ ನಿಲುವನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರಸ್ತುತ ಪಡಿಸಿದರು.
ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕಗೆ ಅ.7 ರಂದು ತೆರಳಿದ್ದಾರೆ.
ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಿದೆ.
ಸುಮಾರು ಎರಡು ದಶಕಗಳ ಬಳಿಕ ಭಾರತದ ಸಂಸದೀಯ ರಾಜತಾಂತ್ರಿಕತೆಯನ್ನು ಪುನರುಜ್ಜೀವಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಉತ್ತಮಪಡಿಸುವುದು, ಜಾಗತಿಕ ಮಟ್ಟದ ಸಭೆಯಲ್ಲಿ ಭಾರತವನ್ನು ಅಧಿಕಾರಿಗಳ ಹೊರತಾಗಿ ಪ್ರತಿನಿಧಿಸುವುದು, ವಿಶ್ವಸಂಸ್ಥೆಯಲ್ಲಿ ಸಂಸದೀಯ ಪ್ರಜಾಪ್ರಭುತ್ವ ದೇಶದ ಪ್ರತಿನಿಧಿಗಳಾಗಿ ಪ್ರಜಾತಂತ್ರದ ಮೌಲ್ಯಗಳನ್ನು ಪ್ರಚುರಪಡಿಸುವುದು ಈ ನಿಯೋಗದ ಉದ್ದೇಶವಾಗಿದೆ. 15 ಸಂಸದರ ಎರಡನೇ ನಿಯೋಗವು ಈ ತಿಂಗಳ ಕೊನೆಯಲ್ಲಿ ಬಿಜೆಪಿ ಸಂಸದೆ ಡಿ. ಪುರಂದೇಶ್ವರಿ ನೇತೃತ್ವದಲ್ಲಿ ನ್ಯೂಯಾರ್ಕ್ ಗೆ ಪ್ರಯಾಣಿಸಲಿದೆ.
My pleasure and privilege to deliver Bharat’s national statement at the General Debate of the Second Committee of the #UNGA, agenda item 21 and 23 on the theme “Five years to 2030 – Multilateral solutions for sustainable development”.
Reiterated that India led by PM Shri… pic.twitter.com/M548Jucuje
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) October 8, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.