ತಿರುವನಂತಪುರಂ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅನ್ನು ವಿಶೇಷ ತನಿಖಾ ತಂಡ (SIT) ಹತ್ತು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ನಂತರ ಇಂದು ಬಂಧಿಸಿದೆ
ಶುಕ್ರವಾರ ಬೆಳಗಿನ ಜಾವ 2:30 ಕ್ಕೆ ಬಂಧನವನ್ನು ಅಧಿಕೃತವಾಗಿ ದಾಖಲಿಸಲಾಗಿದೆ. ಉನ್ನಿಕೃಷ್ಣನ್ ಪೊಟ್ಟಿ ಅವರ ಮೇಲೆ ಶಬರಿಮಲೆ ದೇವಸ್ಥಾನದ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರವನ್ನು ಕಳ್ಳತನ ಮಾಡಿದ ಆರೋಪವಿದೆ.
ಗುರುವಾರ ತಡರಾತ್ರಿ ತಿರುವನಂತಪುರಂ ಜನರಲ್ ಆಸ್ಪತ್ರೆಯಲ್ಲಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು ಮತ್ತು ಇಂದು ಮಧ್ಯಾಹ್ನ ರಾನ್ನಿ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಗುತ್ತಿದೆ. ಹೆಚ್ಚಿನ ವಿಚಾರಣೆಗಾಗಿ SIT ಅವರನ್ನು ಕಸ್ಟಡಿಗೆ ಪಡೆಯುವ ನಿರೀಕ್ಷೆಯಿದೆ.
ಗುರುವಾರದಂದು ಬೆಂಗಳೂರು ಮೂಲದ ಉದ್ಯಮಿ ಆಗಿರುವ ಉನ್ನಿಕೃಷ್ಣನ್ ಪೊಟ್ಟಿಯನ್ನು ವಶಕ್ಕೆ ಪಡೆದಿದ್ದ ಎಸ್ಐಟಿ ತಿರುವನಂತಪುರಂನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು.
ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಎಸ್ಐಟಿ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳಲ್ಲಿ ಚಿನ್ನ ಕಳವು ಜೊತೆಗೆ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನವೂ ಕಾಣೆಯಾದ ಕುರಿತು ತನಿಖೆ ನಡೆಸಲಾಗುತ್ತಿದೆ
#WATCH | Thiruvananthapuram, Kerala | Unnikrishnan Potti, the prime accused in the Sabarimala gold theft case, has been arrested after over ten hours of questioning by the Special Investigation Team (SIT). The arrest was officially recorded at 2:30 a.m. on Friday. Unnikrishnan… pic.twitter.com/AMqUBpLric
— ANI (@ANI) October 17, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.