
ನವದೆಹಲಿ: ವಿಕಸಿತ ಭಾರತ ಯುವ ನಾಯಕರ ಸಂವಾದ 2.0 ನಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಭಾರತದ ಯುವಕರಿಗೆ ಕರೆ ನೀಡಿದ್ದಾರೆ. ಇದು ರಾಷ್ಟ್ರ ನಿರ್ಮಾಣಕ್ಕೆ ಅರ್ಥಪೂರ್ಣವಾಗಿ ಕೊಡುಗೆ ನೀಡಲು ಒಂದು ಅಮೂಲ್ಯವಾದ ಅವಕಾಶ ಎಂದು ಬಣ್ಣಿಸಿದ್ದಾರೆ.
ಎಲ್ಲಾ ಯುವ ನಾಗರಿಕರು ಈ ಉಪಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಬೇಕು ಎಂದು ಪ್ರಧಾನಿ ಒತ್ತಾಯಿಸಿದರು. ಯುವಕರು ಮೊದಲು ವಿಶೇಷವಾಗಿ ವಿನ್ಯಾಸಗೊಳಿಸಲಾದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಈ ಸಂವಾದದಲ್ಲಿ ಭಾಗವಹಿಸುವಂತೆ ಅವರು ಪ್ರೋತ್ಸಾಹಿಸಿದರು.
X ಪೋಸ್ಟ್ ಮಾಡಿರುವ ಮೋದಿ, “ವಿಕಸಿತ ಭಾರತ ಯುವ ನಾಯಕರ ಸಂವಾದ 2.0 ನಮ್ಮ ಯುವಕರಿಗೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಒಂದು ಉತ್ತಮ ಅವಕಾಶವಾಗಿದೆ. ನಮ್ಮ ಯುವಕರ ಆಲೋಚನೆಗಳು ಮತ್ತು ಒಳನೋಟಗಳು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದಾರಿ ತೋರಿಸಬಹುದು” ಎಂದಿದ್ದಾರೆ.
Viksit Bharat Young Leaders Dialogue 2.0 is a great opportunity for our youth to contribute towards nation building. The ideas and insights of our youth can show the way in building a Viksit Bharat.
The way to take part in this Dialogue is to first participate in this specially…
— Narendra Modi (@narendramodi) October 27, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



