
ಜೈಪುರ: ರಾಜಸ್ಥಾನದ ಅಜ್ಮೀರ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚಿಂಗ್ ಸೆಂಟರ್ವೊಂದು 250-300 ಬಡ ಹಿಂದೂ ಮಕ್ಕಳಿಗೆ ಬೈಬಲ್ ಬೋಧಿಸುವ ಮೂಲಕ ದೊಡ್ಡ ವಿವಾದವನ್ನು ಸೃಷ್ಟಿಸಿದೆ.
ವರದಿಗಳ ಪ್ರಕಾರ ಈ ಕೋಚಿಂಗ್ ಸೆಂಟರ್ ಬೈಬಲ್ ಬೋಧಿಸುವುದು ಮಾತ್ರವಲ್ಲದೇ ಸನಾತನ ಧರ್ಮದ ವಿರುದ್ಧ ಸುಳ್ಳುಗಳನ್ನು ಹರಡುತ್ತಿದೆ. ಹಿಂದೂ ಧರ್ಮದ ಬಗ್ಗೆ ಕೆಟ್ಟದ್ದನ್ನು ಹೇಳಿಕೊಡುತ್ತಿದೆ. ಹಿಂದೂ ಆಚರಣೆಗಳನ್ನು ಅಪಹಾಸ್ಯ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಕೃತ್ಯ ಬೆಳಕಿಗೆ ಬಂದ ಕೂಡಲೇ ಸ್ಥಳೀಯ ಹಿಂದೂ ಸಂಘಟನೆಗಳು ಕೋಚಿಂಗ್ ಸೆಂಟರ್ ಮೇಲೆ ದಾಳಿ ನಡೆಸಿವೆ. ಈ ವೇಳೆ ಅಲ್ಲಿದ್ದ ಮಕ್ಕಳು ಕೃತ್ಯವನ್ನು ದೃಢಪಡಿಸಿದ್ದಾರೆ.ತಮಗೆ ಬೈಬಲ್ ಕಲಿಸಲಾಗುತ್ತಿದೆ ಮತ್ತು ಹಿಂದೂ ಧರ್ಮದ ಬಗ್ಗೆ ಕೆಟ್ಟದ್ದನ್ನು ಹೇಳಿಕೊಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
A "coaching center" allegedly lured 250-300 poor Hindu kids—reportedly teaching them the B¡ble while spewing lies against Sanatan Dharma in Ajmer, Rajasthan.
Local Hindu organizations raided the center—the children allegedly confirmed the abuse.
Police are probing the matter. pic.twitter.com/Mion5CTzzL
— Treeni (@TheTreeni) October 30, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



