
ನವದೆಹಲಿ: ನವೆಂಬರ್ 2 ರ ಭಾನುವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ತಮ್ಮ ಚೊಚ್ಚಲ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ಬರೆದಿದೆ. ಮಹಿಳಾ ತಂಡವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಯಶಸ್ಸು ಭಾರತದಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂದಿದ್ದಾರೆ.
ಇಂದು ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ಇಎಸ್ಟಿಐಸಿ) 2025 ರಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಈ ಕಾರ್ಯಕ್ರಮ ವಿಜ್ಞಾನಕ್ಕೆ ಸಂಬಂಧಿಸಿದೆ. ಆದರೆ ಮೊದಲು, ಕ್ರಿಕೆಟ್ನಲ್ಲಿ ಭಾರತದ ಅದ್ಭುತ ಗೆಲುವಿನ ಬಗ್ಗೆ ನಾನು ಮಾತನಾಡುತ್ತೇನೆ. ಇಡೀ ಭಾರತವು ತನ್ನ ಕ್ರಿಕೆಟ್ ತಂಡದ ಯಶಸ್ಸಿನಿಂದ ಸಂತೋಷಗೊಂಡಿದೆ. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್. ನಾನು ನಮ್ಮ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ. ನಿಮ್ಮ ಯಶಸ್ಸು ದೇಶಾದ್ಯಂತ ಲಕ್ಷಾಂತರ ಯುವಕರಿಗೆ ಸ್ಫೂರ್ತಿ ನೀಡುತ್ತದೆ” ಎಂದಿದ್ದಾರೆ.
ಟೀಮ್ ಇಂಡಿಯಾದ ಗೆಲುವಿನ ನಂತರ, ಪ್ರಧಾನಿ ಮೋದಿ ಭಾನುವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಹರ್ಮನ್ಪ್ರೀತ್ ನೇತೃತ್ವದ ತಂಡವನ್ನು ಅಭಿನಂದಿಸಿದ್ದಾರೆ. ಇದನ್ನು “ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅದ್ಭುತ ಗೆಲುವು” ಎಂದು ಬಣ್ಣಿಸಿದ್ದಾರೆ
“ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ಸ್ನಲ್ಲಿ ಭಾರತ ತಂಡದಿಂದ ಅದ್ಭುತ ಗೆಲುವು. ಫೈನಲ್ನಲ್ಲಿ ಅವರ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸದಿಂದ ಗುರುತಿಸಲ್ಪಟ್ಟಿತು. ತಂಡವು ಪಂದ್ಯಾವಳಿಯಾದ್ಯಂತ ಅಸಾಧಾರಣ ತಂಡದ ಕೆಲಸ ಮತ್ತು ದೃಢತೆಯನ್ನು ತೋರಿಸಿತು. ನಮ್ಮ ಆಟಗಾರ್ತಿಯರಿಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಚಾಂಪಿಯನ್ಗಳು ಕ್ರೀಡೆಗಳನ್ನು ಕೈಗೆತ್ತಿಕೊಳ್ಳಲು ಪ್ರೇರೇಪಿಸುತ್ತದೆ” ಎಂದು ಪ್ರಧಾನಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
#WATCH | Delhi: At the Emerging Science, Technology and Innovation Conclave (ESTIC) 2025, PM Narendra Modi says, "This event is related to science. But first, I will talk about India's spectacular victory in cricket. All of India is overjoyed with the success of its cricket team.… pic.twitter.com/HKxifb3oPI
— ANI (@ANI) November 3, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



