ಬೆಳಗಾವಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಕಾರಿನ ಮೇಲೆ ಮಂಗಳವಾರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಇದಕ್ಕೆ ಮತ್ತೊಂದು ನಿದರ್ಶನ.
ಇಂದು ಬೆಳಿಗ್ಗೆ ಬೆಳಗಾವಿಯ ಆರ್ಪಿಡಿ ಕ್ರಾಸ್ನ ಕೃಷ್ಣಮಠದ ಬಳಿ ಶ್ರೀಗಳು ಪ್ರಯಾಣಿಸುತ್ತಿದ್ದ ವೇಳೆ ಅವರು ಕುಳಿತಿದ್ದ ಇನ್ನೋವಾ ಕಾರು ಮತ್ತು ಹಿಂಬಾಲಿಸುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಧಾರ್ಮಿಕ ಕಾರ್ಯಕ್ರಮಕ್ಕಾಗಿ ಶ್ರೀಗಳು ಇಲ್ಲಿಗೆ ಆಗಮಿಸಿದ್ದರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದ ಸುರೇಶ್ ಅಂಗಡಿಯವರ ಬಳಿ ಶ್ರೀಗಳು ಘಟನೆಯನ್ನು ವಿವರಿಸಿದ್ದಾರೆ. ಅವರು ಗೃಹಸಚಿವ ಕೆ.ಜೆ.ಜಾರ್ಜ್ ಅವರ ಸಹಾಯಕನಿಗೆ ಫೋನಾಯಿಸಿ ಮಾಹಿತಿ ನೀಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಮೂಡುಬಿದಿರೆ ಪ್ರಶಾಂತ್ ಪೂಜಾರಿಯ ಹತ್ಯೆ, ಪಿಎಸ್ಐ ಜಗದೀಶ್ ಕೊಲೆ ಹೀಗೆ ರಾಜ್ಯದಲ್ಲಿ ನಿರಂತರ ಅಪರಾಧ ಕೃತ್ಯಗಳು ನಡೆಯುತ್ತಿದೆ. ಆದರೂ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳದೇ ಸುಮ್ಮನೆ ಕೈಕಟ್ಟಿ ಕುಳಿತಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.