
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಹೊಗಳುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಪಕ್ಷದ ನಾಯಕತ್ವವನ್ನು ಮತ್ತೊಮ್ಮೆ ಕೆಣಕಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ತಿರುವನಂತಪುರಂ ಸಂಸದರೂ ಆಗಿರುವ ತರೂರ್, “ದೆಹಲಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ನನ್ನನ್ನೂ ಆಹ್ವಾನಿಸಲಾಗಿತ್ತು. ಅಲ್ಲಿ ನಾನು ಪ್ರಧಾನಿಯವರು “ಭಾರತದ ಅಭಿವೃದ್ಧಿ ಬಗೆಗಿನ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿ” ಕುರಿತು ಮಾತನಾಡಿದರು. ಈ ಮೂಲಕ ಪ್ರಧಾನಿಯವರು ಭಾರತ ಇನ್ನು ಮುಂದೆ ಕೇವಲ ಉದಯೋನ್ಮುಖ ಮಾರುಕಟ್ಟೆ ಅಲ್ಲ, ಆದರೆ ಜಗತ್ತಿಗೆ ಉದಯೋನ್ಮುಖ ಮಾದರಿ ಎಂದು ಒತ್ತಿ ಹೇಳಿದರು. ಇದು ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಪ್ರತಿಬಿಂಬಿಸಿದೆ” ಎಂದಿದ್ದಾರೆ.
“ಪ್ರಧಾನಿ ಮೋದಿ ಅವರು ಯಾವಾಗಲೂ ‘ಚುನಾವಣಾ ಮೋಡ್’ನಲ್ಲಿದ್ದಾರೆ ಎಂದು ಆರೋಪಿಸಲಾಗುತ್ತದೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮೋಡ್’ನಲ್ಲಿದ್ದಾರೆ” ಎಂದು ತರೂರ್ ಹೇಳಿದ್ದಾರೆ. ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಕೇಂದ್ರೀಕರಿಸಿದ ತಮ್ಮ ಭಾಷಣದಲ್ಲಿ ಪ್ರಧಾನಿ ಹೇಳಿದ್ದನ್ನು ತರೂರ್ ಶ್ಲಾಘಿಸಿದ್ದಾರೆ.
ಪ್ರಧಾನಿಯವರ ಭಾಷಣದ ಪ್ರಮುಖ ಭಾಗವು “ಮೆಕಾಲೆಯವರ 200 ವರ್ಷಗಳ ‘ಗುಲಾಮ ಮನಸ್ಥಿತಿ’ ಪರಂಪರೆಯನ್ನು ಉರುಳಿಸಲು” ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನಃಸ್ಥಾಪಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕೆ ಪ್ರಧಾನಿ ಮನವಿ ಮಾಡಿದ್ದರು ಎಂದು ತರೂರ್ ಹೇಳಿದ್ದಾರೆ.
Attended PM @narendramodi’s #RamnathGoenkaLecture at the invitation of @IndianExpress last night. He spoke of India's "constructive impatience" for development and strongly pushed for a post-colonial mindset.
The PM emphasized that India is no longer just an 'emerging market'… pic.twitter.com/97HwGgQ67N
— Shashi Tharoor (@ShashiTharoor) November 18, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



