
ಮುಂಬೈ: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರು ಸೋಮವಾರ ತಮ್ಮ ಮುಂಬೈ ನಿವಾಸದಲ್ಲಿ ನಿಧನರಾದರು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಬಾಲಿವುಡ್ನ ‘ಹಿ-ಮ್ಯಾನ್’ ನಿಧನವನ್ನು ಭಾರತೀಯ ಚಿತ್ರರಂಗದಲ್ಲಿ “ಒಂದು ಯುಗದ ಅಂತ್ಯ” ಎಂದು ಪ್ರಧಾನಿ ಕರೆದಿದ್ದಾರೆ.
“ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ವ್ಯಕ್ತಿತ್ವ, ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಮೋಡಿ ಮತ್ತು ಆಳವನ್ನು ತಂದ ಅದ್ಭುತ ನಟ” ಎಂದು ಪ್ರಧಾನಿ ಮೋದಿ ಅವರು X ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ ರೀತಿ ಅಸಂಖ್ಯಾತ ಜನರ ಹೃದಯಸ್ಪರ್ಶಿಯಾಗಿದೆ ಎಂದಿದ್ದಾರೆ.
The passing of Dharmendra Ji marks the end of an era in Indian cinema. He was an iconic film personality, a phenomenal actor who brought charm and depth to every role he played. The manner in which he played diverse roles struck a chord with countless people. Dharmendra Ji was…
— Narendra Modi (@narendramodi) November 24, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



