
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ನಿಧನರಾಗಿದ್ದಾರೆ ಎಂಬ ವದಂತಿಗಳು ಸೋಶೀಯಲ್ ಮೀಡಿಯಾದಾದ್ಯಂತ ಹಬ್ಬಿವೆ. ಈ ನಡುವೆ, ಜೈಲಿನಲ್ಲಿರುವ ಖಾನ್ ಅವರನ್ನು ಭೇಟಿಯಾಗಲು ಅವರು ಕುಟುಂಬ ಸದಸ್ಯರು ಒತ್ತಾಯಪಡಿಸಿ ಪೊಲೀಸರಿಂದ ಒದೆ ತಿಂದಿದ್ದಾರೆ. ಪೊಲೀಸರು ತಮ್ಮ ಮೇಲೆ “ಕ್ರೂರವಾಗಿ ಹಲ್ಲೆ” ನಡೆಸಿದ್ದಾರೆ ಎಂದು ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ.
ಖಾನ್ ಅವರ ಸಹೋದರಿಯರಾದ ನೊರೀನ್ ಖಾನ್, ಅಲೀಮಾ ಖಾನ್ ಮತ್ತು ಉಜ್ಮಾ ಖಾನ್ – ಈ ವಾರ ರಾವಲ್ಪಿಂಡಿಯ ಅಡಿಯಾಲ ಜೈಲಿನ ಹೊರಗೆ ನಮ್ಮ ಮೇಲೆ ಮತ್ತು ಅಲ್ಲಿ ಜಮಾಯಿಸಿದ್ದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರ ಮೇಲೆ ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಖಾನ್ ಅವರನ್ನು 2023 ರಿಂದ ಅಡಿಯಾಲ ಜೈಲಿನಲ್ಲಿ ಇರಿಸಲಾಗಿದೆ. ಮೂರು ವಾರಗಳಿಂದ ಅವರನ್ನು ಭೇಟಿಯಾಗಲು ನಮಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಖಾನ್ ಅವರ ಸಹೋದರಿಯರು ಆರೋಪಿಸಿದ್ದಾರೆ.
ಖಾನ್ ಅವರನ್ನು ಭೇಟಿಯಾಗಲು ಬಿಡದಿರುವ ಅಧಿಕಾರಿಗಳ ಕ್ರಮ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದೇ ಕಾರಣದಿಂದಾಗಿ ಜೈಲಿನಲ್ಲಿ ಅವರನ್ನು ಕೊಲೆ ಮಾಡಲಾಗಿದೆ ಎಂಬ ಉಹಾಪೋಹಗಳನ್ನು ಸೋಶೀಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
#BREAKING: Midnight Protest by Imran Khan’s sister and PTI supporters outside Adiala Jail. Imran Khan hasn’t been allowed to meet any family member since last more than three weeks. Anger raging across Pakistan against Asim Munir and Pakistani establishment in Rawalpindi. pic.twitter.com/sH0ujS07wv
— Aditya Raj Kaul (@AdityaRajKaul) November 25, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



