
ನವದೆಹಲಿ: ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಇರುವ ಹೊಸ ಸಂಕೀರ್ಣಕ್ಕೆ “ಸೇವಾ ತೀರ್ಥ” ಎಂದು ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹೊಸ ಸಂಕೀರ್ಣವನ್ನು ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ವಿನ್ಯಾಸಗೊಳಿಸಲಾಗಿದ್ದು, ಹಲವಾರು ಪ್ರಮುಖ ಕಚೇರಿಗಳನ್ನು ಒಂದೇ ಸೂರಿನಡಿ ಇರಿಸಲಾಗುವುದು ಎಂದು ವರದಿಯಾಗಿದೆ.
ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವು ತಮ್ಮ ರಾಜ್ಯಪಾಲರು/ಲೆಫ್ಟಿನೆಂಟ್ ಗವರ್ನರ್ಗಳ ನಿವಾಸವನ್ನು ‘ರಾಜ್ ಭವನ/ರಾಜ್ ನಿವಾಸ’ ದಿಂದ ‘ಲೋಕ ಭವನ/ಲೋಕ ನಿವಾಸ’ ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಗೃಹ ಸಚಿವಾಲಯ (ಎಂಎಚ್ಎ) ಈ ನಿಟ್ಟಿನಲ್ಲಿ ನಿರ್ದೇಶನವನ್ನು ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



