
ಬೈಂದೂರು: ಬೈಂದೂರು ಶಾಸಕರಾಗಿರುವ ಗುರುರಾಜ್ ಗಂಟಿಹೊಳೆಯವರು ತಮ್ಮ ಕ್ಷೇತ್ರದ 15 ಕೊರಗ ಬಾಂಧವರನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನಕ್ಕೆ ಕರೆದೊಯ್ದಿದ್ದಾರೆ. ಈ ಮೂಲಕ ಅವರಿಗೆ ಕಲಾಪಗಳ ಬಗ್ಗೆ ತಿಳಿದುಕೊಳ್ಳುವ ಅವಕಾಶವನ್ನು ಮಾಡಿಕೊಟ್ಟಿದ್ದಾರೆ.
ಸಮಾಜದ ಅತ್ಯಂತ ಹಿಂದುಳಿದ ಸಮುದಾಯ ಎಂದು ಕರೆಸಿಕೊಳ್ಳುವ ಕೊರಗ ಸಮುದಾಯ ಇಂದು ಒಂದೊಂದೆ ಹಂತವಾಗಿ ಅಭಿವೃದ್ಧಿ ಪಥದತ್ತ ಹೊರಳುತ್ತಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಅಧಿವೇಶನದ ಬಗ್ಗೆ ಅರಿವು ನೀಡುವುದು ಮಹತ್ವದ್ದಾಗಿದೆ. ಈ ದಿಸೆಯಲ್ಲಿ ಶಾಸಕರು ಮಾಡಿದ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



