ಚಂಡೀಗಢ: ಸಿಖ್ಖರ ಪವಿತ್ರ ಪುಸ್ತಕಕ್ಕೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪಂಜಾಬ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಿಂಸಾಚಾರಗಳು ನಡೆಯುತ್ತಿದೆ. ಇದನ್ನು ತಹಬದಿಗೆ ತರಲು ಕೇಂದ್ರ ಸರ್ಕಾರ ತನ್ನ ಪಡೆಗಳನ್ನು ಅಲ್ಲಿಗೆ ಕಳುಹಿಸಿಕೊಟ್ಟಿದೆ.
ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯನ್ನು ನೀಡಿರುವ ಗುಪ್ತಚರ ಇಲಾಖೆ, ಪಾಕಿಸ್ಥಾನದ ಐಎಸ್ಐ ಪಂಜಾಬ್ನಲ್ಲಿ ಮತ್ತಷ್ಟು ಸಮಸ್ಯೆಯನ್ನು ಸೃಷ್ಟಿಸಲು ಹವಣಿಸುತ್ತಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಸರ್ಕಾರಕ್ಕೆ ಸೂಚನೆ ನೀಡಿದೆ.
ಹೀಗಾಗಿ ಪಂಜಾಬ್ನ ಹಿರಿಯ ಪೊಲೀಸ್ ಅಧಿಕಾರಿ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಈ ಬಗ್ಗೆ ಪತ್ರ ರವಾನಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಎಚ್ಚರಿಸಿದ್ದಾರೆ.
ಪಾಕ್ನಲ್ಲಿ 15-20 ಉಗ್ರರಿಗೆ 2 ತಿಂಗಳ ಕಾಲ ಪಾಕ್ ಗುರುದ್ವಾರವೊಂದರಲ್ಲಿ ಸಿಖ್ ಸಂಪ್ರದಾಯ ಮತ್ತು ಗುರುಮುಖಿ ಪುಸ್ತಕದ ತರಬೇತಿ ನೀಡಲಾಗಿದೆ.
ರಂಜಿತ್ ಸಿಂಗ್ ಎಂಬಾತ ಇವರ ತರಬೇತಿದಾರ, ಈತ ಖಲೀಸ್ತಾನ ಜಿಂದಾಬಾದ್ ಪಡೆಯ ಮುಖ್ಯಸ್ಥ. ಈ ಉಗ್ರರು ಇಲ್ಲಿಗೆ ಬಂದು ಪಂಜಾಬ್ನಲ್ಲಿ ಮತ್ತಷ್ಟು ವಿಧ್ವಂಸಕ ಕೃತ್ಯಗಳನ್ನು, ದಂಗೆಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಪ್ರಸ್ತುತ ಪಂಜಾಬ್ನಲ್ಲಿ ನಡೆಯುತ್ತಿರುವ ಗಲಭೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.