ಫರಿದಾಬಾದ್: ದಲಿತ ಕುಟುಂಬದ ಮನೆ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಆಗ್ರಹಿಸಿ ಹರಿಯಾಣದ ಬಲ್ಲಬ್ಘರ್ನ ಸಂಪೆಡ್ ಗ್ರಾಮದ ಜನರು ಬುಧವಾರ ರಸ್ತೆ ತಡೆ ನಡೆಸಿದರು.
ಮನೆ ಸುಟ್ಟ ವೇಳೆ ಅಸುನೀಗಿದ ಪುಟ್ಟ ಕಂದಮ್ಮಗಳ ಶವವನ್ನೂ ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯ ಹಿನ್ನಲೆಯಲ್ಲಿ ಬಲ್ಲಾವ್ಘರ್ ಮತ್ತು ಫರಿದಾಬಾದ್ ಹೈವೇ ಸ್ಥಗಿತಗೊಂಡಿದೆ.
ಮಂಗಳವಾರ ೨ ಗಂಟೆ ಸುಮಾರಿಗೆ ಕೆಲ ದುಷ್ಕರ್ಮಿಗಳು ಮನೆಯೊಂದರ ಮೇಲೆ ಪೆಟ್ರೋಲ್ ಎರಚಿ ಬೆಂಕಿಕೊಟ್ಟು ಸುಟ್ಟು ಹಾಕಿದ್ದಾರೆ. ಈ ವೇಳೆ ಮನೆಯೊಳಗಿದ್ದ ಎರಡೂವರೆ ವರ್ಷದ ವೈಭವ್ ಮತ್ತು 11 ತಿಂಗಳ ದಿವ್ಯಾ ಎಂಬ ಪುಟಾಣಿ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ.
ಈ ಘಟನೆಯ ಬಗ್ಗೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಪೊಲೀಸ್ ಇಲಾಖೆಯಿಂದ ವರದಿ ಕೇಳಿದ್ದಾರೆ. ಕಾಂಗ್ರೆಸ್ ಮುಖಂಡ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.