
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದೊಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಕಾಂಗ್ರೆಸ್ಸಿನದು ನಾಲಾಯಕ್ ಸರಕಾರ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ಕೊಡುವಂತೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ” ಎಂದು ಟೀಕಿಸಿದ್ದಾರೆ.
ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂದು ನನಗಂತೂ ಅರ್ಥ ಆಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು. ಗಮನಿಸುತ್ತ ಹೋದರೆ, ಈ ಸರಕಾರದ ಒಂದೊಂದು ನಿರ್ಣಯವೂ ಪ್ರಜಾಪ್ರಭುತ್ವವನ್ನು ಅಣಕಿಸುವ ರೀತಿಯಲ್ಲಿದೆ. ಇದು ಖಂಡಿತ ಸರಿಯಲ್ಲ ಎಂದರು.
ಈ ನಿರ್ಧಾರವನ್ನು ರಾಜ್ಯ ಸರಕಾರ ಹಿಂಪಡೆಯಬೇಕು. ಮಾಧ್ಯಮಗಳಿಗೆ ನಿರ್ಬಂಧ ಹೇರುವುದನ್ನು ನಾವು ಖಂಡಿತ ಒಪ್ಪಲು ಸಾಧ್ಯವಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಮತ್ತೊಮ್ಮೆ ಹೇಳುವುದಾಗಿ ತಿಳಿಸಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಜಯಘೋಷ ಕೂಗುವುದಕ್ಕೆ ಕಡಿವಾಣ ಹಾಕಲು ಈ ಅಯೋಗ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ; ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದರೂ ಪುರಾವೆಗಳಿಲ್ಲವೆಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂಥ ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಲು ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಖಂಡಿಸಿದರು. ಈಗ ಸಚಿವರ ಕಚೇರಿಯಲ್ಲಿ ಕಳ್ಳತನದ ನೆಪವೊಡ್ಡಿ ಈ ರೀತಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎಂದ ಅವರು, ಈ ಕುರಿತ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


