
ಬೈಂದೂರು: ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿರುವುದು, ಅವರೊಂದಿಗೆ ಸಂವಾದ ನಡೆಸಿರುವುದು ನಿಜಕ್ಕೂ ಒಂದು ಅವಿಸ್ಮರಣೀಯ ಕ್ಷಣಗಳಲ್ಲಿ ಒಂದು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಹೇಳಿದ್ದಾರೆ.
ಹರ್ಕೂರು ಗ್ರಾಮದ ನಾರ್ಕಳಿ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡ ವೇಳೆ ಶಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊರಗ ಸಮುದಾಯದ ಬಗ್ಗೆ ವಿಶೇಷ ಒಲವು ಹೊಂದಿರುವ ಗಂಟಿಹೊಳೆ ಅವರ ಬಗ್ಗೆ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳು ಇದೇ ವೇಳೆ ಅಭಿಮಾನ ವ್ಯಕ್ತಪಡಿಸಿದರು.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಗಂಟಿಹೊಳೆ ಅವರು, ಸಮಾಜದ ಮುಖ್ಯವಾಹಿನಿಗೆ ತೆರೆದುಕೊಳ್ಳುತ್ತಿರುವ ಕೊರಗ ಸಮಾಜವನ್ನು ಹಿಂದೂ ಸಮಾಜ ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದೆ. ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೊಸ ಪ್ರೇರಣೆಯನ್ನು ನೀಡಿದೆ ಮಾತ್ರವಲ್ಲದೆ ಅವರ ನೋವು ನಲಿವುಗಳನ್ನು ಅರಿತುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಬರೆದಿದ್ದಾರೆ.




ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


