
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್ಸಿನವರು ತಮ್ಮ ಕೆಟ್ಟ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ. ವಿದೇಶಿ ಅತಿಥಿಗಳ ಸಮ್ಮುಖದಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಅವಮಾನ ಮಾಡುವಂತೆ ನಡೆದುಕೊಂಡಿದ್ದು ಖಂಡನೀಯ ಎಂದರು. ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ಮಾತನಾಡಿ, ಎಐ ಶೃಂಗಸಭೆಯಲ್ಲಿ 30- 35 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದು, ಭಾರತಕ್ಕೆ ಅವಮಾನವಾಗುವ ರೀತಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.
ಭಾರತದಲ್ಲಿ ಉತ್ತಮ ಆವಿಷ್ಕಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರಿಗೂ ಧಿಕ್ಕಾರ ಕೂಗಿದ ಯುವ ಕಾಂಗ್ರೆಸ್ಸಿಗರ ವರ್ತನೆ ಅನಪೇಕ್ಷಣೀಯ ಎಂದು ಹೇಳಿದರು. ಇವರ ವರ್ತನೆಯನ್ನು ಖಂಡಿಸಿ ಸಾರ್ವಜನಿಕರೂ ಒದೆ- ಗೂಸಾ ಕೊಟ್ಟಿದ್ದಾರೆ ಎಂದು ಗಮನ ಸೆಳೆದರು. ಇದನ್ನು ಖಂಡಿಸಿ ಕೆಪಿಸಿಸಿ ಕಚೇರಿಗೂ ಮುತ್ತಿಗೆ ಹಾಕುವುದಾಗಿ ಹೇಳಿದರು.
ಯುವ ಕಾಂಗ್ರೆಸ್ಸಿನವರು ಮಾನ ಮರ್ಯಾದೆ ಇಲ್ಲದವರಂತೆ ನಡೆದುಕೊಂಡಿದ್ದಾರೆ ಎಂದು ದೂರಿದರು. ಅವರನ್ನು ಸಮರ್ಥಿಸುವ ನಾಯಕರ ಕ್ರಮವೂ ಖಂಡನೀಯ ಎಂದು ಹೇಳಿದರು.
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾತನಾಡಿ, ಕಾಂಗ್ರೆಸ್ಸಿನವರು ಎಲ್ಲ ಕಾರ್ಯಕ್ರಮ, ಯೋಜನೆಗಳಿಗೆ ತಮ್ಮ ನಾಯಕರಾದ ನೆಹರೂ, ಇಂದಿರಾ, ರಾಜೀವ್ ಗಾಂಧಿಯವರ ಹೆಸರು ಇಟ್ಟುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ನಮ್ಮ ಪ್ರಧಾನಿ ಮೋದಿಜೀ ಅವರು ಯಾವುದೇ ಒಂದು ಯೋಜನೆಗೂ ತಮ್ಮ ಹೆಸರನ್ನು ಇಟ್ಟುಕೊಂಡಿಲ್ಲ ಎಂದು ಗಮನ ಸೆಳೆದರು. ದೇಶದ ಮಾನ ಕಳೆಯುವಂತೆ ನಿನ್ನೆ ನಡೆದ ಘಟನೆ ಅತ್ಯಂತ ಖಂಡನೀಯ ಎಂದು ಟೀಕಿಸಿದರು. ಇದೇವೇಳೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ಸಿಗರಿಗೆ ಧಿಕ್ಕಾರ ಕೂಗಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡ ಉಮೇಶ್ ಶೆಟ್ಟಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


