ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆಯನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಿವಿಧ ವೃತ್ತಿ ನಿರತ ಹಾಗೂ ಆಸಕ್ತ ಕುಶಲ ಕರ್ಮಿಗಳು ತಮ್ಮ ಬದುಕು ಕಟ್ಟಿಕೊಂಡಿರುತ್ತಾರೆ. ಬಹು ಮುಖ್ಯವಾಗಿ ಗ್ರಾಮೀಣ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿದ್ದು ಅವರ ದುಡಿಮೆಗೆ ಇನ್ನೂ ಹೆಚ್ಚಿನ ಸಹಕಾರ ದೊರೆತರೆ ಸ್ವಾವಲಂಬಿಗಳಾಗುವುದರ ಜೊತೆಗೆ ಇತರರನ್ನೂ ಕೂಡಿ ಕೊಂಡು ಸಣ್ಣ ಉದ್ಯಮ ನಡೆಸುವ ಮೂಲಕ ಇತರರಿಗೂ ಉದ್ಯೋಗ ನೀಡುವ ಹಂತಕ್ಕೆ ಬರಲು ಪೂರಕ ವಾತಾವರಣ ನಿರ್ಮಾಣವಾಗಬೇಕು.. ಆ ನಿಟ್ಟಿನಲ್ಲಿ ಗ್ರಾಮೀಣ ದುಡಿಮೆಗೆ ಸರಕಾರಿ ಯೋಜನೆಗಳ ಬೆಂಬಲ ಪೂರಕವಾಗಿರಲಿ ಎಂದರು.

ಒಟ್ಟು 174 ಅರ್ಹ ಫಲನುಭವಿಗಳಿಗೆ ವಿವಿಧ ಸವಲತ್ತು ವಿತರಣೆ :
ಕ್ಷೇತ್ರದ ಸುಮಾರು 174 ಜನಫಲಾನುಭವಿಗಳಿಗೆ ವಿವಿಧ ಸಲಕರಣೆ ಕಿಟ್ ವಿತರಿಸಲಾಯಿತು. ಟೈಲರಿಂಗ್ 132, ಗಾರೆ ಕೆಲಸ 18, ಮರ ಗೆಲಸ 07, ಎಲೆಕ್ಟ್ರಿಷಿಯನ್ 06, ಬ್ಯೂಟಿ ಪಾರ್ಲರ್ 09,ದೋಬಿ ಹಾಗೂ ಕ್ಷೌರಿಕ ವೃತ್ತಿಯ ತಲಾ 01 ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


