
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ.
ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ. ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರಲಾಗುತ್ತಿದೆ. ಯುವ ಮನಸುಗಳಲ್ಲಿ ದೇಶವಿರೋಧಿ ಚಿಂತನೆಯನ್ನು ಬಿತ್ತಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಾಮಫಲಕಕ್ಕೆ ಮಸಿ ಬಳಿದು ವಿವಿಯ ಒಳಗೆ ನುಗ್ಗಿದ ಕಾರ್ಯಕರ್ತರನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದರು. ದೇಶದ ಐಕ್ಯತೆ ಹಾಗೂ ಸಮಗ್ರತೆಗೆ ಧಕ್ಕೆ ತರುವ ವಿವಿಯನ್ನು ನಿಷೇಧಿಸಬೇಕು ಎಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಕಾರ್ಯಕರ್ತರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


