
ನವದೆಹಲಿ: ಭಯೋತ್ಪಾದನೆ ಮತ್ತು ಮೂಲಭೂತವಾದ ಕೇವಲ ದೇಶಕ್ಕೆ ಮಾತ್ರವಲ್ಲ ಇಡೀ ಮಾನವೀಯತೆಗೆ ಬಹುದೊಡ್ಡ ಆಪತ್ತು ಮತ್ತು ಗಂಭೀರ ಸವಾಲಾಗಿದೆ. ವಿಶ್ವದಲ್ಲಿ ನಡೆಯುತ್ತಿರುವ ಅನೇಕ ಬಿಕ್ಕಟ್ಟುಗಳಿಗೆ ಸಂಬಂಧಿಸಿದಂತೆ ಭಾರತದ ಚಿಂತನೆ ಸ್ಪಷ್ಟವಾಗಿದೆ, ನಾವು ಸದಾ ಶಾಂತಿ ಮತ್ತು ಸ್ಥಿರತೆಗಾಗಿ ಮನವಿ ಮಾಡುತ್ತಾ ಬಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಸನ್ನಿವೇಶ ನಾವು ಅತ್ಯಂತ ಗಂಭೀರವಾಗಿ ಚಿಂತಿಸಬೇಕಾದ ವಿಷಯ. ಭಾರತವು ಸಂವಾದ ಮತ್ತು ರಾಜ ತಾಂತ್ರಿಕತೆಯ ಮಾಧ್ಯಮದ ಮೂಲಕ ಎಲ್ಲಾ ವಿವಾದಗಳನ್ನು ಪರಿಹರಿಸುವುದನ್ನು ಬೆಂಬಲಿಸುತ್ತದೆ. ಕಠಿಣ ಪರಿಸ್ಥಿತಿಯಲ್ಲಿರುವ ಎಲ್ಲಾ ಭಾರತೀಯ ನಾಗರಿಕರ ಸುರಕ್ಷತೆಗಾಗಿ ಎಲ್ಲಾ ದೇಶಗಳೊಂದಿಗೆ ತೊಡಗಿಸಿಕೊಂಡು ಕಾರ್ಯಪ್ರವೃತ್ತರಾಗಿದ್ದೇವೆ” ಎಂದಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ತಿಳಿಸಿದ್ದಾರೆ.
ಜಗತ್ತಿನ ಎಲ್ಲೇ ಆಗಲಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ನಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದಿದ್ದಾರೆ.
ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


