
ಬೆಂಗಳೂರು: ಕರ್ನಾಟಕ ಸರ್ಕಾರ ತನ್ನ ಮುಂಬರುವ ಬಜೆಟ್ ನಲ್ಲಿ SCSP / TSP ಹಣ ದುರ್ಬಳಕೆ ಮುಂದುವರಿಸಿದರೆ ಬಜೆಟ್ ಪ್ರತಿಗೆ ಬೆಂಕಿ ಹಚ್ಚುವುದಾಗಿ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ದಲಿತ ಸಂಘಟನೆಗಳ ಬಜೆಟ್ ಪೂರ್ವ ದುಂಡು ಮೇಜಿನ ಸಭೆಯಲ್ಲಿ ಸರ್ಕಾರದ ಮೊಂಡು ಧೋರಣೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಯಿತು. 70 ಹೆಚ್ಚು ಸಂಘಟನೆಗಳ 150ಕ್ಕೂ ಮಿಕ್ಕ ಹೋರಾಟಗಾರರು ಚರ್ಚೆಯಲ್ಲಿ ಪಾಲ್ಗೊಂಡರು.
ಬಜೆಟ್ ಮಂಡಿಸುವ ಪ್ರಾರಂಭದಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ‘ ಈ ವರ್ಷದ ಗ್ಯಾರಂಟಿ ಯೋಜನೆಗಳಿಗೆ ದಲಿತರ ಮೀಸಲು ನಿಧಿಯನ್ನು ದುರ್ಬಳಕೆ ಮಾಡುವುದಿಲ್ಲʼ ಎಂದು ಘೋಷಿಸಬೇಕು . ಆನಂತರವೇ ಅವರು ಬಜೆಟ್ ಭಾಷಣವನ್ನು ಮುಂದುವರಿಸಬೇಕು ಎಂದು ಸಭೆ ಒಕ್ಕೊರಲಿನಿಂದ ಆಗ್ರಹಿಸಿದೆ.
ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಐ ಎ ಎಸ್ ಅಧಿಕಾರಿ ಲಕ್ಷ್ಮಿನಾರಾಯಣ್ ವಹಿಸಿದ್ದರು .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


