
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಭಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಭಾರತ ಸರ್ಕಾರವು ನವದೆಹಲಿಯಲ್ಲಿ ವಿಶೇಷ ಸ್ಪೆಷಲ್ ಕಂಟ್ರೋಲ್ ರೂಂ ಸ್ಥಾಪಿಸಿದೆ.
ಯುಎಸ್-ಇಸ್ರೇಲ್ನಿಂದ ಇರಾನ್ ಮೇಲೆ ನಡೆಯುತ್ತಿರುವ ದಾಳಿಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪ್ರಕಾರ, ಈ ನಿಯಂತ್ರಣ ಕೊಠಡಿ ಭಾರತೀಯ ಸಮಯದ ಪ್ರಕಾರ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸುತ್ತದೆ.
ಸಹಾಯಕ್ಕಾಗಿ ಟೋಲ್-ಫ್ರೀ ಸಂಖ್ಯೆ 1800-11-8797 ಅಥವಾ ಲ್ಯಾಂಡ್ಲೈನ್ ಸಂಖ್ಯೆಗಳು +91-11-23012113, +91-11-23014104, +91-11-23017905 ಅನ್ನು ಬಳಸಬಹುದು.
ಇರಾನ್ನ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಕುವೈತ್, ಬಹ್ರೈನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮೇಲೆ ಮಿಸೈಲ್ ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸುತ್ತಿದೆ.
ಇದರಿಂದ ಆಕಾಶ ಮಾರ್ಗಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ ಮತ್ತು ಮಿಲಿಟರಿ ಹಾಗೂ ನಾಗರಿಕ ಸಾವುನೋವುಗಳು ಸಂಭವಿಸಿವೆ. ಈ ಘರ್ಷಣೆಯು ತೀವ್ರಗೊಂಡಿದ್ದು, ಯುಎಸ್ ಪಡೆಗಳು ನೌಕಾ ಕಾರ್ಯಾಚರಣೆಗಳೊಂದಿಗೆ ಪ್ರತಿದಾಳಿ ನಡೆಸುತ್ತಿವೆ.
ಇದು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ದಶಕಗಳಲ್ಲಿ ಅತ್ಯಂತ ಗಂಭೀರ ಮತ್ತು ಸುದೀರ್ಘ ಸಂಘರ್ಷಗಳಲ್ಲಿ ಒಂದಾಗಿದೆ. ಬಹ್ರೈನ್, ಇರಾನ್, ಇರಾಕ್, ಇಸ್ರೇಲ್ ಮತ್ತು ಯುಎಇ ಸೇರಿದಂತೆ ಪ್ರದೇಶದ ದೇಶಗಳಲ್ಲಿರುವ ಭಾರತೀಯ ದೂತಾವಾಸಗಳ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ MEA ಪ್ರಕಟಿಸಿದೆ.ಈ ಪರಿಸ್ಥಿತಿಯಲ್ಲಿ ಭಾರತೀಯ ನಾಗರಿಕರು ಎಚ್ಚರಿಕೆ ವಹಿಸಿ, ಅಗತ್ಯವಿದ್ದರೆ ಮೇಲಿನ ಸಂಖ್ಯೆಗಳಿಗೆ ಸಂಪರ್ಕಿಸಿ ಎಂದು ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


