
ನವದೆಹಲಿ: ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರು ಇಂದು ಬೆಳಿಗ್ಗೆ ಭಾರತಕ್ಕೆ ಆಗಮಿಸಿದ್ದು, ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಬರಮಾಡಿಕೊಂಡರು. ಅಧ್ಯಕ್ಷ ಸ್ಟಬ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಔಪಚಾರಿಕ ಸ್ವಾಗತ ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು.
ಸ್ಟಬ್ ಅವರು ರೈಸಿನಾ ಸಂವಾದ 2026 ರಲ್ಲಿ ಮುಖ್ಯ ಅತಿಥಿ ಮತ್ತು ಮುಖ್ಯ ಭಾಷಣಕಾರರೂ ಆಗಿದ್ದಾರೆ.
ನವದೆಹಲಿಗೆ ಆಗಮಿಸಿದ ನಂತರ ಎಕ್ಸ್ ಪೋಸ್ಟ್ ಮಾಡಿರುವ ಅವರು, ತಮ್ಮ ಭೇಟಿಯು ವ್ಯಾಪಾರ ಕ್ಷೇತ್ರ ಸೇರಿದಂತೆ ಫಿನ್ಲ್ಯಾಂಡ್ ಮತ್ತು ಭಾರತದ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಫಿನ್ಲ್ಯಾಂಡ್ ಅಧ್ಯಕ್ಷರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಭೇಟಿಯು ಭಾರತ-ಫಿನ್ಲ್ಯಾಂಡ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದ್ದಾರೆ.
ನಾಳೆ ಅವರೊಂದಿಗಿನ ಸಭೆ ಮತ್ತು ರೈಸಿನಾ ಸಂವಾದ 2026 ರಲ್ಲಿ ಅಧ್ಯಕ್ಷರ ಸ್ಟಬ್ ಅವರ ಪ್ರಮುಖ ಭಾಷಣಕ್ಕಾಗಿ ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


