ಪಾಟ್ನಾ: ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪಾಟ್ನಾದ ಬಿಹಾರ ವಿಧಾನಸಭೆಯಲ್ಲಿ ಕಾರ್ಯದರ್ಶಿಯ ಮುಂದೆ ನಾಮಪತ್ರ ಸಲ್ಲಿಸಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಉನ್ನತ ಮಟ್ಟದ ನಾಯಕರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು, ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಕುಮಾರ್ ಅವರು ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗುವುದು ತಮ್ಮ ಬಯಕೆ ಎಂದು ಹೇಳಿದ್ದಾರೆ.
ಒಂದು ವೇಳೆ ಅವರು ರಾಜ್ಯಸಭೆಗೆ ಆಯ್ಕೆಯಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತದೆ. ಮಗನಿಗೆ ಪಟ್ಟ ನೀಡಲು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ವದಂತಿಯೂ ಇದೆ.
2 ದಶಕಗಳಿಗೂ ಹೆಚ್ಚು ಕಾಲ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಬಿಹಾರದ ಜನರಿಗೆ ಕೃತಜ್ಞತೆ ಸಲ್ಲಿಸಿರುವ ನಿತಿನ್, ಜನರು ತೋರಿಸಿದ ವಿಶ್ವಾಸದಿಂದಾಗಿ ಬಿಹಾರ ಇಂದು ಅಭಿವೃದ್ಧಿ ಮತ್ತು ಘನತೆಯ ಹೊಸ ಆಯಾಮವನ್ನು ಪ್ರಸ್ತುತಪಡಿಸುತ್ತಿದೆ ಎಂದಿದ್ದಾರೆ
ಬಿಹಾರದ ಜನರೊಂದಿಗಿನ ತಮ್ಮ ಸಂಪರ್ಕ ಮುಂದುವರಿಯುತ್ತದೆ ಮತ್ತು ಹೊಸ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.
ಏತನ್ಮಧ್ಯೆ, ಕೆಲವು ಜೆಡಿಯು ಕಾರ್ಯಕರ್ತರು ಪಾಟ್ನಾದಲ್ಲಿರುವ ಮುಖ್ಯಮಂತ್ರಿಯ ನಿವಾಸದ ಹೊರಗೆ ಪ್ರತಿಭಟನೆ ನಡೆಸಿ, ಅವರು ರಾಜ್ಯಸಭಾಗೆ ತೆರಳುವ ಸಾಧ್ಯತೆಯನ್ನು ವಿರೋಧಿಸಿದ್ದಾರೆ.
ಈ ಹಿಂದೆ, ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನವೀನ್ ಸೇರಿದಂತೆ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿತ್ತು, ಆದರೆ ಎನ್ಡಿಎ ಮಿತ್ರ ಉಪೇಂದ್ರ ಕುಶ್ವಾಹ ಸತತ ಎರಡನೇ ಅವಧಿಗೆ ಆಯ್ಕೆಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


