
ನವದೆಹಲಿ: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಇಂದು ಕೊನೆಗೊಳ್ಳಲಿದೆ. ಎರಡು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ತಿಂಗಳು 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ ಮಾರ್ಚ್ 26.
ತಮಿಳುನಾಡಿನಲ್ಲಿ, ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ, ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ತಮಿಳುನಾಡಿಗೆ ಮತ್ತು ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಈ ತಿಂಗಳ 30 ರಂದು ಅಧಿಸೂಚನೆ ಹೊರಡಿಸಲಾಗುವುದು. ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನಕ್ಕೆ ಏಪ್ರಿಲ್ 2 ರಂದು ಅಧಿಸೂಚನೆ ಹೊರಡಿಸಲಾಗುವುದು.
ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಮತ ಎಣಿಕೆ ಮೇ 4 ರಂದು ನಡೆಯಲಿದೆ.
126 ಸದಸ್ಯರನ್ನು ಹೊಂದಿರುವ ಅಸ್ಸಾಂ ವಿಧಾನಸಭೆಯ ಅವಧಿ ಮೇ 20 ರಂದು ಮತ್ತು 140 ಸದಸ್ಯರನ್ನು ಹೊಂದಿರುವ ಕೇರಳ ವಿಧಾನಸಭೆಯ ಅವಧಿ ಮೇ 23 ರಂದು ಕೊನೆಗೊಳ್ಳಲಿದೆ.
30 ಸದಸ್ಯರನ್ನು ಹೊಂದಿರುವ ಪುದುಚೇರಿ ವಿಧಾನಸಭೆ ಜೂನ್ 15 ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯ ಅವಧಿ ಮೇ 10 ರಂದು ಮತ್ತು 294 ಸದಸ್ಯರನ್ನು ಹೊಂದಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿ ಮೇ 7 ರಂದು ಕೊನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


