
ನವದೆಹಲಿ: ಮೋದಿ ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ಭಾರತ ಎಡಪಂಥೀಯ ಉಗ್ರವಾದದಿಂದ ಮುಕ್ತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಎಡಪಂಥೀಯ ಉಗ್ರವಾದವು ಪೀಡಿತ ಪ್ರದೇಶಗಳಲ್ಲಿ ಅಭಿವೃದ್ಧಿಯನ್ನು ನಿರ್ಬಂಧಿಸಿತ್ತು, ಆದರೆ ಈಗ ಅಭಿವೃದ್ಧಿ ಆ ಪ್ರದೇಶಗಳಿಗೆ ತಲುಪುತ್ತಿದೆ ಎಂದು ಶಾ ಹೇಳಿದ್ದಾರೆ.
ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳುವ ಯಾರೇ ಆದರೂ ಅವರನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಮತ್ತು ಗುಂಡಿಗೆ ಗುಂಡಿನಿಂದಲೇ ಉತ್ತರಿಸಲಾಗುವುದು ಎಂದು ಶಾ ಒತ್ತಿ ಹೇಳಿದರು. ದೇಶವನ್ನು ಎಡಪಂಥೀಯ ಉಗ್ರವಾದದಿಂದ ಮುಕ್ತಗೊಳಿಸುವ ಪ್ರಯತ್ನಗಳ ಕುರಿತು ನಿಯಮ 193 ರ ಅಡಿಯಲ್ಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಚರ್ಚೆಗೆ ಅವರು ಉತ್ತರಿಸುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


