
ನವದೆಹಲಿ: ಸಂಸತ್ತಿನಲ್ಲಿ ಸಾಫ್ಟ್ ಪಿಆರ್ ಮತ್ತು ಸಮೋಸಾಗಳ ಬಗ್ಗೆ ಮಾತನಾಡುವ ಬದಲು ಮೋದಿ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುವಂತೆ ಎಎಪಿ ಸಂಸದ ರಾಘವ್ ಚಡ್ಡಾ ಅವರಿಗೆ ಅವರ ಪಕ್ಷದ ನಾಯಕ ಸೌರಭ್ ಭಾರಧ್ವಜ್ ಹಿತವಚನ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಿದ ಎಎಪಿ ಕ್ರಮಕ್ಕೆ ರಾಘವ್ ಚಡ್ಡಾ ಅವರು ನೀಡಿದ ಮೊದಲ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಭಾರದ್ವಾಜ್ ಅವರು ವೀಡಿಯೊ ಬಿಡುಗಡೆ ಮಾಡಿದ್ದಾರೆ.
“ಮೌನವಾಗಿದ್ದೇನೆ, ಸೋಲಿಸಲ್ಪಟ್ಟಿಲ್ಲ” ಇದು ಆಮ್ ಆದ್ಮಿಗೆ ನನ್ನ ಸಂದೇಶ ಎಂದು ರಾಘವ್ ಚಡ್ಡಾ ಹೇಳಿದ್ದರು. ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಮಸ್ಯೆಗಳನ್ನು ಎತ್ತುವುದು ಅಪರಾಧವೇ ಎಂದು ಅವರು ಎಎಪಿಯನ್ನು ಪ್ರಶ್ನೆ ಮಾಡಿದ್ದಾರೆ.
ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಸ್ಥಾನದಿಂದ ಕೈಬಿಟ್ಟು ಅಶೋಕ್ ಮಿತ್ತಲ್ ಅವರನ್ನು ಎಎಪಿ ಉಪ ನಾಯಕನ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಇದರಿಂದ ಪಕ್ಷದಲ್ಲಿ ಆಂತರಿಕ ಬಿರುಕು ಉಂಟಾಗಿದೆ ಎಂಬ ಊಹಾಪೋಹಗಳು ಎದ್ದಿದೆ.
ರಾಘವ್ ಚಡ್ಡಾ ಅವರು ಸದನದಲ್ಲಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳನ್ನು ಎತ್ತುವ ಮೂಲಕ ಆಗಾಗ ಸುದ್ದಿಯಾಗುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


