
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಗುಂಪಿನ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಅನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಆರಂಭಿಕ ವರದಿಗಳ ಪ್ರಕಾರ ದಾಳಿಕೋರರು ಎಲ್ಇಟಿ ಕಮಾಂಡರ್ ಹಫೀಜ್ ಸಯೀದ್ ಆಪ್ತ ಸಹಚರ ಅಫ್ರಿದಿ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಅಮೆರಿಕ ನಿಷೇಧಿಸಿದ ಭಯೋತ್ಪಾದಕ ಗುಂಪಿನ ಕಾರ್ಯಾಚರಣೆಗಳಲ್ಲಿ ಅಫ್ರಿದಿಯನ್ನು ಪ್ರಮುಖ ಕೊಂಡಿ ಎಂದು ಪರಿಗಣಿಸಲಾಗಿತ್ತು. ತನಿಖಾಧಿಕಾರಿಗಳು ಆತನ ಸಾವನ್ನು ಗುರಿಯಾಗಿಟ್ಟುಕೊಂಡು ಮಾಡಿದ ಹತ್ಯೆ ಎಂದು ಪರಿಗಣಿಸಿದ್ದಾರೆ.
ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನದಲ್ಲಿ ಉನ್ನತ ಮಟ್ಟದ ಭಯೋತ್ಪಾದಕರ ಮೇಲೆ ನಡೆದ ಇದೇ ರೀತಿಯ ದಾಳಿಗಳಿಗೆ ಈ ಹತ್ಯೆ ಹೊಸ ಸೇರ್ಪಡೆಯಾಗಿದೆ. ಕಳೆದ ತಿಂಗಳು, ಪಾಕಿಸ್ತಾನದ ಲಾಹೋರ್ನಲ್ಲಿ ಟಿವಿ ಕೇಂದ್ರದ ಹೊರಗೆ ಅಪರಿಚಿತ ಬಂದೂಕುಧಾರಿಯೊಬ್ಬ ವಾಂಟೆಡ್ ಭಯೋತ್ಪಾದಕ ಮತ್ತು ಎಲ್ಇಟಿ ಸ್ಥಾಪಕ ಸದಸ್ಯ ಅಮೀರ್ ಹಮ್ಜಾ ಅವರನ್ನು ಗುರಿಯಾಗಿಸಿಕೊಂಡಿದ್ದ. 67 ವರ್ಷದ ಹಮ್ಜಾ ದಾಳಿಯಿಂದ ಬದುಕುಳಿದಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅದಕ್ಕೂ ಮೊದಲು, ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನ ಹಿರಿಯ ಸಹೋದರ ಮುಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಂದರ್ಭಗಳಲ್ಲಿ ನಿಧನರಾದರು ಎಂದು ವರದಿಯಾಗಿದೆ. ಅನ್ವರ್ ಜೈಶ್-ಎ-ಮೊಹಮ್ಮದ್ನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಭಯೋತ್ಪಾದಕ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


