
ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಲವಾದ ಮುನ್ನಡೆ ಕಾಯ್ದುಕೊಂಡಿದೆ. ಈಗಾಗಲೇ ದೇಶವ್ಯಾಪಿಯಾಗಿ ಸಂಭ್ರಮಾಚರಣೆ ಆರಂಭಗೊಂಡಿದೆ. ಈ ನಡುವೆ ಹೇಳಿಕೆ ನೀಡಿರುವ ಅಲ್ಲಿನ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಹಿಂದೂ ಮತಗಳ ಕ್ರೋಢೀಕರಣ ಬಿಜೆಪಿ ಗೆಲುವಿಗೆ ಕಾರಣ ಎಂದರು.
ಅಲ್ಲದೇ ಆದಿವಾಸಿ ಸಮುದಾಯಗಳ ಗಮನಾರ್ಹ ಬೆಂಬಲವನ್ನು ಕೂಡ ಬಿಜೆಪಿ ಕಂಡಿದೆ ಎಂದು ಹೇಳಿದರು.
ಬಿಜೆಪಿಯ ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಅಧಿಕಾರಿ, ಜನರು ದುರಾಡಳಿತದ ವಿರುದ್ಧ ಮತ ಚಲಾಯಿಸಿದರು ಎಂದಿದ್ದಾರೆ.
“ಶ್ಯಾಮ ಪ್ರಸಾದ್ ಮುಖರ್ಜಿಯವರ ಕಾಲದಿಂದಲೂ ಬಿಜೆಪಿ ಪಶ್ಚಿಮಬಂಗಾಳದಲ್ಲಿ ಅಧಿಕಾರಕ್ಕೇರುವ ಕನಸು ಕಾಣುತ್ತಿದೆ, ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೀಗ ಅದು ಸಾಗುತ್ತಿದೆ” ಎಂದು ಹೇಳಿದ್ದಾರೆ.
ಬಂಗಾಳವನ್ನು ದೇಶದ ಸಾಂಸ್ಕೃತಿಕ ರಾಜಧಾನಿ ಎಂದು ಅಧಿಕಾರಿ ಬಣ್ಣಿಸಿದ್ದು, ಬದಲಾವಣೆಗಳಿಗೆ ಪ್ರಸ್ತುತ ಸರ್ಕಾರದ ಅಧಿಕಾರಾವಧಿಯೇ ಕಾರಣ ಎಂದು ಹೇಳಿದರು. ಅಭಿಯಾನವನ್ನು ಮುನ್ನಡೆಸಿದ್ದಕ್ಕಾಗಿ ಮತ್ತು ಶ್ರಮಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಶ್ಲಾಘಿಸಿದರು ಮತ್ತು ಜನರು ಮತ್ತು ಪ್ರಧಾನಿ ಮೋದಿ ಇಬ್ಬರಿಗೂ ಧನ್ಯವಾದ ಅರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


