ವಾಷಿಂಗ್ಟನ್: ಭಾರತದ ರೀತಿಯಲ್ಲಿ ಪಾಕಿಸ್ಥಾನದೊಂದಿಗೆ ನಾಗರಿಕ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳುತ್ತಿಲ್ಲ ಎಂದು ಅಮೆರಿಕಾ ಸ್ಪಷ್ಟಪಡಿಸಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದಿದೆ.
‘ನಾವು ಪಾಕಿಸ್ಥಾನದೊಂದಿಗೆ 123 ಅಗ್ರಿಮೆಂಟ್ ಮಾಡಿಕೊಳ್ಳುವುದಿಲ್ಲ ಮತ್ತು ನಾಗರಿಕ ಪರಮಾಣು ರಫ್ತಿಗೆ ಅನುಕೂಲವಾಗುವಂತೆ ಪರಮಾಣು ಪೂರೈಕಾ ಗುಂಪಿನಿಂದ ಪಾಕ್ನ್ನು ಹೊರತುಪಡಿಸಲು ಬಯಸುವುದಿಲ್ಲ’ ಎಂದು ಅಮೆರಿಕಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಲ್ಲದೇ ಪಾಕ್ನೊಂದಿಗೆ 123 ಅಗ್ರಿಮೆಂಟ್ಗೆ ಮಾಡಿಕೊಳ್ಳುತ್ತಿದ್ದೇವೆ ಎಂಬ ಮಾಧ್ಯಮಗಳ ವರದಿ ಸಂಪೂರ್ಣ ಸುಳ್ಳು ಎಚಿದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ಪಾಕ್ ಪ್ರಧಾನಿ ನವಾಝ್ ಶರೀಫ್ ಅವರು ಅಮೆರಿಕಾ ಅಧ್ಯಕ್ಷರೊಂದಿಗೆ ಗುರುವಾರ ಮಾತುಕತೆ ನಡೆಸಿದ್ದರು. ಇವರ ಮಾತುಕತೆಯ ಬಳಿಕ ಉಭಯ ದೇಶಗಳು ನಾಗರಿಕ ಪರಮಾಣು ಒಪ್ಪಂದ ಮಾಡಿಕೊಂಡಿವೆ ಎಂಬ ಸುದ್ದಿ ಬಿತ್ತರಗೊಂಡಿತ್ತು.
ಭಾರತದ ವಿರುದ್ಧ ಪರಮಾಣು ಅಸ್ತ್ರಗಳನ್ನು ತಯಾರಿಸ ಬೇಡಿ ಇದರಿಂದ ಭವಿಷ್ಯದಲ್ಲಿ ಅಸ್ಥಿರತೆ ಉಂಟಾಗಬಹುದು ಎಂದು ನವಾಝ್ ಅವರಿಗೆ ಒಬಾಮ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಆದರೆ ನವಾಝ್ ಅವರು ಹಠಾತ್ ಎದುರಾಗುವ ಯುದ್ಧವನ್ನು ಎದುರಿಸಲು ಇದು ಅನಿವಾರ್ಯ ಎಚಿದು ವಾದಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.